ADVERTISEMENT

ತುಂಗಭದ್ರಾ ಅಣೆಕಟ್ಟೆ: 3 ಗೇಟ್ ಅಳವಡಿಕೆ ಪೂರ್ಣ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 23:30 IST
Last Updated 12 ಫೆಬ್ರುವರಿ 2026, 23:30 IST
ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರೆಸ್ಟ್‌ಗೇಟ್‌ಗೆ ಸ್ಲಿಂಪ್ಲೇಟ್‌ ಅಳವಡಿಸುವ ಕೆಲಸ ಗುರುವಾರ ನಡೆಯಿತು  –ಪ್ರಜಾವಾಣಿ ಚಿತ್ರ
ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರೆಸ್ಟ್‌ಗೇಟ್‌ಗೆ ಸ್ಲಿಂಪ್ಲೇಟ್‌ ಅಳವಡಿಸುವ ಕೆಲಸ ಗುರುವಾರ ನಡೆಯಿತು  –ಪ್ರಜಾವಾಣಿ ಚಿತ್ರ   

ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯ 19 ಮತ್ತು 32ನೇ ಕ್ರೆಸ್ಟ್‌ಗೇಟ್‌ಗಳನ್ನು ಗುರುವಾರ ಯಶಸ್ವಿಯಾಗಿ ಅಳವಡಿಸಲಾಗಿದೆ. 33 ಗೇಟ್‌ಗಳಲ್ಲಿ ಮೂರು ಗೇಟ್‌ ಅಳವಡಿಕೆ ಕಾರ್ಯ ಪೂರ್ಣಗೊಂಡಿತು. 

‘ಸದ್ಯ ನಂ. 1, 4, 11,17, 20, 24, 26, 27, 28 ಮತ್ತು 33 (ಒಟ್ಟು 10) ಗೇಟ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ.ಒಟ್ಟು 15 ಹಳೆಗೇಟ್‌ಗಳನ್ನು ಕತ್ತರಿಸಿ ತೆಗೆಯಲಾಗಿದ್ದು, ಇನ್ನೂ ಎರಡು ಗೇಟ್‌ ಕತ್ತರಿಸುವ ಕೆಲಸ ಪ್ರಗತಿಯಲ್ಲಿದೆ’ ಎಂದು ತುಂಗಭದ್ರಾ ಮಂಡಳಿ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT