
ಕ್ರೆಸ್ಟ್‌ಗೇಟ್ ತಜ್ಞ ಕನ್ಹಯ್ಯ ನಾಯ್ಡು ಅವರು ಮಂಗಳವಾರ ತುಂಗಭಧ್ರಾ ಅಣೆಕಟ್ಟೆಗೆ ಭೇಟಿ ನೀಡಿ ಗೇಟ್ ಅಳವಡಿಕೆ ಕಾಮಗಾರಿಗಳ ಪರಿಶೀಲನೆ ನಡೆಸಿದರು. ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಒ.ಆರ್.ಕೆ.ರೆಡ್ಡಿ ಜತೆಗಿದ್ದರು
– ಪ್ರಜಾವಾಣಿ ಚಿತ್ರ
ಹೊಸಪೇಟೆ (ವಿಜಯನಗರ): ಕ್ರೆಸ್ಟ್‌ಗೇಟ್ ತಜ್ಞ ಎನ್.ಕನ್ಹಯ್ಯ ನಾಯ್ಡು ಅವರು ಮಂಗಳವಾರ ತುಂಗಭದ್ರಾ ಅಣೆಕಟ್ಟೆಗೆ ಭೇಟಿ ನೀಡಿ, ಕ್ರೆಸ್ಟ್‌ಗೇಟ್ ಅಳವಡಿಕೆ ಕಾರ್ಯ ಪರಿಶೀಲಿಸಿದರು.
18ನೇ ಕ್ರೆಸ್ಟ್‌ಗೇಟ್ ಅಳವಡಿಕೆ ಆಗಿದ್ದು, ಗೇಟ್ ಎತ್ತುವ ಪ್ರಯೋಗವೂ ಯಶಸ್ವಿಯಾಗಿದೆ. ಗೇಟ್ ಸಂಖ್ಯೆ 4, 21 ಮತ್ತು 27ರಲ್ಲಿ ಕ್ರೆಸ್ಟ್‌ಗೇಟ್ ಅಳವಡಿಕೆ ಕಾರ್ಯ ಅಂತಿಮ ಹಂತದಲ್ಲಿದೆ.
‘ಜನವರಿ ಅಂತ್ಯದೊಳಗೆ ಕನಿಷ್ಠ ನಾಲ್ಕು ಕ್ರೆಸ್ಟ್‌ಗೇಟ್ ಅಳವಡಿಕೆ ಮುಗಿಯಲಿದೆ. ಮುಂದಿನ ತಿಂಗಳಿನಿಂದ ಈ ಕಾಮಗಾರಿಗೆ ಇನ್ನಷ್ಟು ವೇಗ ಸಿಗಲಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.