ಹೊಸಪೇಟೆ (ವಿಜಯನಗರ): ‘ತುಂಗಭದ್ರಾ ಅಣೆಕಟ್ಟೆಯ 32 ಕ್ರಸ್ಟ್‌ಗೇಟ್‌ಗಳನ್ನು ಬದಲಿಸಿ ಹೊಸ ಗೇಟ್ ಅಳವಡಿಸಲು ಕರೆಯಲಾಗಿದ್ದ ಟೆಂಡರ್‌ಗೆ ನಾಲ್ಕು ಕಂಪನಿಗಳು ಬಿಡ್ ಸಲ್ಲಿಸಿವೆ’ ಎಂದು ತುಂಗಭದ್ರಾ ಮಂಡಳಿಯ ಮೂಲಗಳು ತಿಳಿಸಿವೆ.
‘ಯಾವ ಕಂಪನಿ ಟೆಂಡರ್ ನಿಯಮಾವಳಿ ಪಾಲಿಸಿದೆ ಎಂಬುದನ್ನು ಪರಿಶೀಲಿಸಿ ಅಂತಿಮವಾಗಿ ಕಂಪನಿಯನ್ನು ಆಯ್ಕೆ ಮಾಡಲಾಗುವುದು. ಇನ್ನು ಮೂರು–ನಾಲ್ಕು ದಿನಗಳಲ್ಲಿ ನಿರ್ಧಾರವಾಗಲಿದೆ’ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ಅಣೆಕಟ್ಟೆಯ 19ನೇ ಗೇಟ್‌ಗೆ ಕ್ರಸ್ಟ್‌ಗೇಟ್ ಅಳವಡಿಸುವ ಗುತ್ತಿಗೆಯನ್ನು ಅಹಮದಾಬಾದ್‌ನ ಹಾರ್ಡ್‌ವೇರ್ ಟೂಲ್ಸ್ ಆ್ಯಂಡ್ ಮೆಷಿನರಿ ಪ್ರೊಜೆಕ್ಟ್ ಕಂಪನಿ ಪಡೆದಿದೆ. ಮುಂಗಾರು ಮಳೆ ಆರಂಭವಾಗಿದ್ದರೂ ಕೆಲಸ ಇನ್ನೂ ಆರಂಭವಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.