ADVERTISEMENT

ತುಂಗಭದ್ರಾ ಅಣೆಕಟ್ಟೆ: ಗೇಟ್‌ ಅಳವಡಿಕೆ ಕಾರ್ಯಕ್ಕೆ ಪೂಜೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2024, 10:44 IST
Last Updated 14 ಆಗಸ್ಟ್ 2024, 10:44 IST
<div class="paragraphs"><p>19ನೇ&nbsp; ಕ್ರಸ್ಟ್‌ಗೇಟ್‌ ಇದ್ದ ಸ್ಥಳದಲ್ಲಿ ತಾತ್ಕಾಲಿಕ ಗೇಟ್ ನಿರ್ಮಾಣ ಸಂಬಂದ ಬುಧವಾರ ಜಿಲ್ಲಾ ಉಸ್ತುವರಿ ಸಚಿವ ಜಮೀರ್ ಅಹ್ಮದ್ ಖಾನ್‌ ಪೂಜೆ ನೆರವೇರಿಸಿದರು.</p></div>

19ನೇ  ಕ್ರಸ್ಟ್‌ಗೇಟ್‌ ಇದ್ದ ಸ್ಥಳದಲ್ಲಿ ತಾತ್ಕಾಲಿಕ ಗೇಟ್ ನಿರ್ಮಾಣ ಸಂಬಂದ ಬುಧವಾರ ಜಿಲ್ಲಾ ಉಸ್ತುವರಿ ಸಚಿವ ಜಮೀರ್ ಅಹ್ಮದ್ ಖಾನ್‌ ಪೂಜೆ ನೆರವೇರಿಸಿದರು.

   

ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯ ಕೊಚ್ಚಿಹೋಗಿರುವ 19ನೇ  ಕ್ರಸ್ಟ್‌ಗೇಟ್‌ ಇದ್ದ ಸ್ಥಳದಲ್ಲಿ ತಾತ್ಕಾಲಿಕ ಗೇಟ್ ನಿರ್ಮಾಣ ಸಂಬಂದ ಬುಧವಾರ ಜಿಲ್ಲಾ ಉಸ್ತುವರಿ ಸಚಿವ ಜಮೀರ್ ಅಹ್ಮದ್ ಖಾನ್‌ ಪೂಜೆ ನೆರವೇರಿಸಿದರು.

ತಾಂತ್ರಿಕ ತಜ್ಞ ಕನ್ನಯ್ಯ ನಾಯ್ಡು ಅವರ ಜತೆ ತಡೆ ಗೇಟ್ ನಿರ್ಮಾಣ ಕುರಿತು ಚರ್ಚಿಸಿದರು. ಎರಡು ದಿನಗಳಲ್ಲಿ ಗೇಟ್ ನಿರ್ಮಾಣ ಕಾರ್ಯ ಪೂರ್ಣ ಗೊಳಿಸುವುದಾಗಿ ಇದೇ ಸಂದರ್ಭದಲ್ಲಿ ಕನ್ನಯ್ಯ ನಾಯ್ಡು ತಿಳಿಸಿದರು.

ADVERTISEMENT

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಎಸ್‌ಪಿ ಶ್ರೀಹರಿಬಾಬು ಬಿ.ಎಲ್‌. ಇದ್ದರು.

ಗೇಟ್‌ ಆಗಮನಕ್ಕೆ ಕ್ಷಣಗಣನೆ: ಹೊಸಹಳ್ಳಿಯ ಹಿಂದೂಸ್ತಾನ್‌ ಸಂಸ್ಥೆಯ ಶೆಡ್‌ನಿಂದ ಒಂದು ಗೇಟ್‌ ಯಾವುದೇ ಕ್ಷಣದಲ್ಲಿ ಅಣೆಕಟ್ಟೆಯತ್ತ ಹೊರಡಲಿದ್ದು, ಜನರಲ್ಲಿ ಕುತೂಹಲ ಮೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.