
ಪ್ರಜಾವಾಣಿ ವಾರ್ತೆ
ಹೊಸಪೇಟೆ (ವಿಜಯನಗರ): ‘ತುಂಗಭದ್ರಾ ಅಣೆಕಟ್ಟೆಯ 4 ಮತ್ತು 27ನೇ ಗೇಟ್‌ಗಳಲ್ಲಿ ಹೊಸ ಕ್ರೆಸ್ಟ್‌ಗೇಟ್ ಅಳವಡಿಕೆ ಕಾರ್ಯ ಶನಿವಾರ ಪೂರ್ಣಗೊಂಡಿದ್ದು, ಈ ಮೂಲಕ ಒಟ್ಟು 10 ಗೇಟ್‌ಗಳ ಅಳವಡಿಕೆ ಪೂರ್ಣಗೊಂಡಂತಾಗಿದೆ’ ಎಂದು ತುಂಗಭದ್ರಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
‘ಸದ್ಯ ಗೇಟ್ ನಂ.3, 11, 24, 26ರಲ್ಲಿ (ಒಟ್ಟು 4) ಕ್ರೆಸ್ಟ್‌ಗೇಟ್ ಅಳವಡಿಕೆ ಕೆಲಸ ಪ್ರಗತಿಯಲ್ಲಿದೆ. ಇದುವರೆಗೆ ಹಳೆಯ 20 ಗೇಟ್‌ಗಳನ್ನು ಪೂರ್ತಿ ತೆರವುಗೊಳಿಸಲಾಗಿದ್ದು, 3 ಗೇಟ್‌ಗಳನ್ನು ತೆರವುಗೊಳಿಸುವ ಕೆಲಸ ಪ್ರಗತಿಯಲ್ಲಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.