ತುಂಗಭದ್ರಾ ಜಲಾಶಯ
ಹೊಸಪೇಟೆ (ವಿಜಯನಗರ): ತುಂಗಭದ್ರಾ ಜಲಾಶಯದಲ್ಲಿ ಇದೀಗ 77.14 ಟಿಎಂಸಿ ಅಡಿ ನೀರು ಸಂಗ್ರಹವಾಗಿರುವುದರಿಂದ, ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಬುಧವಾರ ಮಧ್ಯಾಹ್ನ ನಾಲ್ಕು ಕ್ರಸ್ಟ್‌ಗೇಟ್‌ಗಳನ್ನು ಎರಡು ಅಡಿಗಳಷ್ಟು ಎತ್ತರಕ್ಕೆ ಎತ್ತಿ 9,400 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಯಿತು.
ಇದರ ಜತೆಗೆ 1,000 ಕ್ಯೂಸೆಕ್‌ನಷ್ಟು ನೀರು ವಿದ್ಯುದಾಗಾರ ಮೂಲಕ ಸಾಗಿ ಹೊರಬರುತ್ತಿದೆ. ಹೀಗಾಗಿ ಒಟ್ಟು 10,400 ಕ್ಯೂಸೆಕ್‌ನಷ್ಟು ನೀರನ್ನು ಅಣೆಕಟ್ಟೆಯಿಂದ ಹೊರಬಿಡಲಾಗುತ್ತಿದೆ.
ಬುಧವಾರ ಬೆಳಿಗ್ಗೆ ತುಂಗಭದ್ರಾ ಮಂಡಳಿ 2 ಕ್ರಸ್ಟ್‌ಗೇಟ್‌ಗಳನ್ನು ಎರಡು ಅಡಿಯಷ್ಟು ಎತ್ತಿ 4,680 ಕ್ಯೂಸೆಕ್‌ನಷ್ಟು ನೀರನ್ನು ನದಿಗೆ ಹರಿಸಲು ಆರಂಭಿಸಿತ್ತು. ಮಧ್ಯಾಹ್ನದ ಬಳಿಕ ಮತ್ತೆ ಎರಡು ಗೇಟ್‌ಗಳನ್ನು ತೆರೆಯಲಾಯಿತು.
ಸದ್ಯ ಜಲಾಶಯದ ಒಳಹರಿವಿನ ಪ್ರಮಾಣ 32,767 ಕ್ಯೂಸೆಕ್‌ನಷ್ಟಿದೆ. 1,633 ಅಡಿ ಎತ್ತರದ ಅಣೆಕಟ್ಟೆಯಲ್ಲಿ 1,625.20 ಅಡಿ ಮಟ್ಟದಲ್ಲಿ ನೀರಿದೆ. 105.78 ಟಿಎಂಸಿ ಅಡಿಯಷ್ಟು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಈ ಬಾರಿ 80 ಟಿಎಂಸಿ ಅಡಿಯಷ್ಟು ಮಾತ್ರ ನೀರು ಸಂಗ್ರಹಿಸಿ ಇಟ್ಟುಕೊಂಡು ಹೆಚ್ಚುವರಿ ನೀರನ್ನು ನದಿಗೆ ಬಿಡುವ ವಿಚಾರ ಇದ್ದು, ಒಳಹರಿವು ಅಧಿಕವಾದರೆ ಇನ್ನಷ್ಟು ಗೇಟ್‌ಗಳನ್ನು ತೆರೆದು ನೀರು ಹರಿಸುವ ಸಾಧ್ಯತೆ ದಟ್ಟವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.