ADVERTISEMENT

ತುಂಗಭದ್ರಾ ಒಳಹರಿವು ಇಳಿಮುಖ

​ಪ್ರಜಾವಾಣಿ ವಾರ್ತೆ
Published 10 ಮೇ 2021, 6:59 IST
Last Updated 10 ಮೇ 2021, 6:59 IST

ಹೊಸಪೇಟೆ (ವಿಜಯನಗರ): ಸತತ ಏರಿಕೆ ಕಾಣುತ್ತಿದ್ದ ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಸೋಮವಾರ ಸ್ವಲ್ಪ ತಗ್ಗಿದೆ.

ಸೋಮವಾರ 4,738 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಭಾನುವಾರ 6,580 ಕ್ಯುಸೆಕ್‌ ಒಳಹರಿವು ದಾಖಲಾಗಿತ್ತು.1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,582.05 ಅಡಿ ನೀರಿನ ಸಂಗ್ರಹ ಇದೆ. 248 ಕ್ಯುಸೆಕ್‌ ನೀರು ಕಾಲುವೆಗೆ ಹರಿಸಲಾಗುತ್ತಿದೆ.

ಜಲಾನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಮುಂಗಾರಿಗೂ ಮುನ್ನವೇ ಅಣೆಕಟ್ಟೆಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಸದ್ಯ ದೂರವಾಗಿದೆ. ಅಚ್ಚುಕಟ್ಟು ಪ್ರದೇಶದ ರೈತರ ಸಂತಸಕ್ಕೂ ಕಾರಣವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.