ಹರಪನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಮುತ್ತಿಗಿ ಗ್ರಾಮದಿಂದ ಮತ್ತಿಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಹಳ್ಳದಲ್ಲಿ ಬೈಕ್ ಉರುಳಿ ಬಿದ್ದ ಪರಿಣಾಮ ಒಂದೇ ಗ್ರಾಮದ ಇಬ್ಬರು ಯುವಕರು ಸಾವನ್ನಪ್ಪಿದ್ದು, ಇನ್ನೊಬ್ಬ ಗಾಯಗೊಂಡಿದ್ದಾರೆ ಎಂದು ಚಿಗಟೇರಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ಎನ್.ಶೀರನಹಳ್ಳಿ ಗ್ರಾಮದ ನಾಗರಾಜ್ (25), ಅಡಿವೆಪ್ಪ (25) ಮೃತಪಟ್ಟವರು. ಮಡಿವಾಳರ ಬಸವರಾಜ್ ಗಾಯಗೊಂಡಿದ್ದು, ಕೊಟ್ಟೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಮಧ್ಯರಾತ್ರಿ ಮೂರು ಜನ ಪ್ರಯಾಣಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ. ಆ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಬಿದ್ದು ಪ್ರಜ್ಞೆ ತಪ್ಪಿದ್ದ ಗಾಯಾಳು ಬಸವರಾಜ್ ಎಚ್ಚರಗೊಂಡಾಗ ತನ್ನ ಸ್ನೇಹಿತರು ಸಾವನ್ನಪ್ಪಿರುವುದು ಗೊತ್ತಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿ ಮಾದರಿ ಸಂಗ್ರಹಿಸಿದ್ದಾರೆ. ಪೊಲೀಸ್ ಶ್ವಾನದಳವೂ ಆಗಮಿಸಿತ್ತು. ಎಸ್ಪಿ ಶ್ರೀಹರಿಬಾಬು ಬಿ.ಎಲ್. ಡಿವೈಎಸ್ಪಿ ವೆಂಕಪ್ಪ ನಾಯಕ, ಸಿಪಿಐ ಸಾಬಯ್ಯ ಅವರು ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.