ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಇಬ್ಬರು ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 15:18 IST
Last Updated 19 ಆಗಸ್ಟ್ 2021, 15:18 IST
ಹೊಸಪೇಟೆಯ ಮುನ್ಸಿಪಲ್‌ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯನ್ನು ಪಲ್ಸ್‌ ಆಕ್ಸಿಮೀಟರ್‌ನಿಂದ ಪರೀಕ್ಷೆ ನಡೆಸಲಾಯಿತು
ಹೊಸಪೇಟೆಯ ಮುನ್ಸಿಪಲ್‌ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯನ್ನು ಪಲ್ಸ್‌ ಆಕ್ಸಿಮೀಟರ್‌ನಿಂದ ಪರೀಕ್ಷೆ ನಡೆಸಲಾಯಿತು   

ಹೊಸಪೇಟೆ (ವಿಜಯನಗರ): ಪಿಯುಸಿ ದ್ವಿತೀಯ ವರ್ಷದಪರೀಕ್ಷೆಯ ಮೊದಲ ದಿನ ನಗರದ ಪರೀಕ್ಷಾ ಕೇಂದ್ರದಲ್ಲಿ ಇಬ್ಬರು ವಿದ್ಯಾರ್ಥಿಗಳಷ್ಟೇ ಪರೀಕ್ಷೆ ಬರೆದರು.

ಗುರುವಾರ ನಗರದ ಮುನ್ಸಿಪಲ್ ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಗಣಿತಶಾಸ್ತ್ರ ಪರೀಕ್ಷೆ ನಡೆಯಿತು. ಇಬ್ಬರು ಪುನರಾವರ್ತಿತ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಎದುರಿಸಿದರು. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆ ವಿದ್ಯಾರ್ಥಿಗಳ ಥರ್ಮಲ್‌ ಸ್ಕ್ರೀನಿಂಗ್ ನಡೆಸಿ ಕೊಠಡಿಯೊಳಗೆ ಕಳುಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT