ಹೊಸಪೇಟೆ (ವಿಜಯನಗರ): ಜೀವನದಲ್ಲಿ ವೈಫಲ್ಯ ಎಂಬುದು ಸೋಲಲ್ಲ, ಅದು ಜೀವನದ ಒಂದು ದೊಡ್ಡ ಭಾಗ ಮತ್ತು ಗೆಲುವಿಗೆ ಇರುವ ಮೆಟ್ಟಿಲು. ಈ ಸೋಲನ್ನು ಸರಿಯಾದ ರೀತಿಯಲ್ಲಿ ಅರಿತುಕೊಂಡು ನಿರಂತರ ಪ್ರಯತ್ನದಿಂದ ಯಶಸ್ಸಿನ ಶಿಖರ ಏರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಶ್ರೀಹರಿಬಾಬು ಬಿ.ಎಲ್. ಹೇಳಿದರು.
ಹಂಪಿ ಕನ್ನಡ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಶನಿವಾರ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗವು ಆಯೋಜಿಸಿದ ಯುಜಿಸಿ ನೆಟ್ ಹಾಗೂ ಕೆ-ಸೆಟ್ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
‘ಸಕಾರಾತ್ಮಕ ಮನೋಭಾವದಿಂದ ಜೀವಕ್ಕೆ ಬೇಕಾದ ಕೌಶಲ ಮತ್ತು ತಾಳ್ಮೆ ಒಗ್ಗೂಡಿಸಿಕೊಂಡರೆ ಯಶಸ್ಸಿನ ಹಾದಿ ಸುಲಭವಾಗುತ್ತದೆ. ಆದರೆ ಇಂದು ಸಾಕಷ್ಟು ಸೌಲಭ್ಯಗಳಿದ್ದರೂ ಇಚ್ಛಾಶಕ್ತಿ ಕೊರತೆಯ ಕಾರಣ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಮುಟ್ಟಲು ಸಾಧ್ಯವಾಗುತ್ತಿಲ್ಲ. ಶ್ರದ್ಧೆ, ಆಸಕ್ತಿ, ತಾಳ್ಮೆ, ಪರಿಶ್ರಮ ಹಾಗೂ ಸತತವಾದ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ’ ಎಂದರು.
ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟಗಿರಿ ದಳವಾಯಿ ಸಂವೇದನಾಶೀಲ ಅಧಿಕಾರಿಗಳು ಸಮಾಜಕ್ಕೆ ಅಗತ್ಯವಾಗಿ ಬೇಕಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.