ADVERTISEMENT

ಮಳೆಯಲ್ಲೇ ಲಸಿಕೆಗೆ ಉತ್ಸಾಹ ತೋರಿದ ಜನ

​ಪ್ರಜಾವಾಣಿ ವಾರ್ತೆ
Published 12 ಮೇ 2021, 8:20 IST
Last Updated 12 ಮೇ 2021, 8:20 IST
ಹೊಸಪೇಟೆಯಲ್ಲಿ ಬುಧವಾರ ಬೆಳಿಗ್ಗೆ ಸುರಿದ ಮಳೆಗೆ ಉದ್ಯೋಗ ಪೆಟ್ರೋಲ್‌ ಬಂಕ್‌ ಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅಪಾರ ನೀರು ಸಂಗ್ರಹಗೊಂಡಿತು. ಸಾರ್ವಜನಿಕರು ಮಳೆ ನೀರಿನಲ್ಲೇ ಸಾಲಿನಲ್ಲಿ ನಿಂತು ಲಸಿಕೆ ಹಾಕಿಸಿಕೊಂಡರು
ಹೊಸಪೇಟೆಯಲ್ಲಿ ಬುಧವಾರ ಬೆಳಿಗ್ಗೆ ಸುರಿದ ಮಳೆಗೆ ಉದ್ಯೋಗ ಪೆಟ್ರೋಲ್‌ ಬಂಕ್‌ ಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅಪಾರ ನೀರು ಸಂಗ್ರಹಗೊಂಡಿತು. ಸಾರ್ವಜನಿಕರು ಮಳೆ ನೀರಿನಲ್ಲೇ ಸಾಲಿನಲ್ಲಿ ನಿಂತು ಲಸಿಕೆ ಹಾಕಿಸಿಕೊಂಡರು   

ಹೊಸಪೇಟೆ (ವಿಜಯನಗರ): ಕೋವಿಡ್‌–19ನಿಂದ ಸಾವು ನೋವು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಲಸಿಕೆ ಹಾಕಿಸಿಕೊಳ್ಳಲು ಹೆಚ್ಚಿನ ಉತ್ಸಾಹ ತೋರಿಸುತ್ತಿದ್ದು, ಬುಧವಾರ ಮಳೆಯಲ್ಲೇ ಬಂದು ಲಸಿಕೆ ಪಡೆದರು.

ನಗರ ಸೇರಿದಂತೆ ತಾಲ್ಲೂಕಿನ ಎಲ್ಲ ಲಸಿಕಾ ಕೇಂದ್ರಗಳಲ್ಲಿ ಈಗ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ಕೇಂದ್ರಗಳಿಗೆ ಹೋಗಿ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ.

ಮಂಗಳವಾರದಿಂದ 18 ವರ್ಷ ಮೇಲಿನವರಿಗೂ ಲಸಿಕೆ ಹಾಕಲಾಗುತ್ತಿದ್ದು, ಯುವಕರು ಉತ್ಸಾಹದಿಂದ ಲಸಿಕೆ ಪಡೆಯುತ್ತಿದ್ದಾರೆ. ಸದ್ಯ ನಗರದ ಉದ್ಯೋಗ ಪೆಟ್ರೋಲ್‌ ಬಂಕ್‌ ಬಳಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 18 ವರ್ಷ ಮೇಲಿನವರಿಗೆ ಲಸಿಕೆ ನೀಡಲಾಗುತ್ತಿದೆ. ಕೋವಿನ್‌ ವೆಬ್‌ಸೈಟ್‌ ಅಥವಾ ಆರೋಗ್ಯ ಸೇತು ಆ್ಯಪ್‌ನಲ್ಲಿ ಮುಂಚೆಯೇ ಹೆಸರು ನೋಂದಣಿ ಮಾಡಿಸಿಕೊಂಡವರು ಕೇಂದ್ರಕ್ಕೆ ಬಂದು ಲಸಿಕೆ ಪಡೆದರು.

ADVERTISEMENT

ಬುಧವಾರ ಬೆಳಿಗ್ಗೆ ಮಳೆಯ ನಡುವೆಯೇ ಯುವಕ/ಯುವತಿಯರು ಆರೋಗ್ಯ ಕೇಂದ್ರದ ಎದುರು ಸಾಲುಗಟ್ಟಿ ನಿಂತು ಲಸಿಕೆ ಹಾಕಿಸಿಕೊಂಡರು. ಕೇಂದ್ರದ ಆವರಣದಲ್ಲಿ ಅಪಾರ ಮಳೆ ನೀರು ಸಂಗ್ರಹವಾಗಿತ್ತು. ಉಳಿದ ಏಳು ಕೇಂದ್ರಗಳಲ್ಲಿ 45 ವರ್ಷ ಮೇಲಿನವರಿಗೆ ಮೊದಲ ಮತ್ತು ಎರಡನೇ ಡೋಸ್‌ ಹಾಕಲಾಗುತ್ತಿದ್ದು, ಅಲ್ಲೂ ಜನರ ಸಾಲು ಕಂಡು ಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.