ಹೊಸಪೇಟೆ: ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ವಾಲ್ಮೀಕಿ ಸಮುದಾಯ ಪ್ರತಿಭಟನೆ
ಹೊಸಪೇಟೆ (ವಿಜಯನಗರ): ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ನಾಯಕ ಸಮುದಾಯದ ಕುರಿತು ಅವಹೇಳನಕಾರಿ ಹೇ ಳಿಕೆ ನೀಡಿರುವುದನ್ನು ವಿರೋಧಿಸಿ ಹೊಸಪೇಟೆ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ರಮೇಶ್ ಕತ್ತಿ ಅವರ ಫೊಟೋಕ್ಕೆ ಕತ್ತೆಯ ಮುಝದ ಚಿತ್ರ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು.
'ರಮೇಶ್ ಕತ್ತಿ ನಮ್ಮ ಸಮುದಾಯದ ಜಾತಿ ನಿಂದನೆ ಮಾಡಿದ್ದಾರೆ.
ಅವರ ವಿರುದ್ಧ ಈ ಕೂಡಲೇ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು' ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಜಾತಿ ನಿಂದನೆ ಪ್ರಕರಣ ದಾಖಲಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.
ಈಗಾಗಲೇ ನಾನಾ ಕಡೆ ಪ್ರಕರಣ ದಾಖಲಾಗಿದ್ದರೂ ಅವರನ್ನು ಬಂಧಿಸದೆ ಇರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಕೊನೆಯಲ್ಲಿ ವಿಜಯನಗರ ಎಸ್ಪಿ ಎಸ್.ಜಾಹ್ನವಿ ಅವರ ಮೂಲಕ ಗೃಹಸಚಿವ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮನವಿ ಪತ್ರ ಕಳುಹಿಸಿಕೊಡಲಾಯಿತು.
ಸಮಾಜದ ಅಧ್ಯಕ್ಷ ಗೋಸಲ ಭರಮಪ್ಪ, ಕಾರ್ಯದರ್ಶಿ ಶ್ರೀನಿವಾಸ ದೇವರಮನಿ, ರೈತಸಂಘದ ಮುಖಂಡ ನಾಗರಾಜ್ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.