ADVERTISEMENT

ವರಮಹಾಲಕ್ಷ್ಮಿ ಹಬ್ಬ: ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿನ, ಕುಂಕುಮ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 10:05 IST
Last Updated 5 ಆಗಸ್ಟ್ 2022, 10:05 IST
ಹೊಸಪೇಟೆಯ ವಡಕರಾಯ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರಿಗೆ ಅರಿಶಿನ, ಕುಂಕು, ಬಳೆ ನೀಡಲಾಯಿತು
ಹೊಸಪೇಟೆಯ ವಡಕರಾಯ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರಿಗೆ ಅರಿಶಿನ, ಕುಂಕು, ಬಳೆ ನೀಡಲಾಯಿತು   

ಹೊಸಪೇಟೆ (ವಿಜಯನಗರ): ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಶುಕ್ರವಾರ ಮಹಿಳೆಯರಿಗೆ ಅರಿಶಿನ, ಕುಂಕುಮ ಹಾಗೂ ಬಳೆ ನೀಡಲಾಯಿತು.

ನಗರದ ವಡಕರಾಯ ದೇವಸ್ಥಾನ, ತಾಲ್ಲೂಕಿನ ಹೊಸೂರಮ್ಮ ದೇವಸ್ಥಾನದ ಕೊಟ್ಟೂರು ತಾಲ್ಲೂಕಿನ ಗುರು ಬಸವೇಶ್ವರ ಸ್ವಾಮಿ ದೇವಸ್ಥಾನ, ಹೂವಿನಹಡಗಲಿ ತಾಲ್ಲೂಕಿನ ಮೈಲಾರಲಿಂಗೇಶ್ವರ, ಹರಪನಹಳ್ಳಿ ತಾಲ್ಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ಸ್ವಾಮಿ ದೇವಸ್ಥಾನ, ಉಚ್ಚೆಂಗೆಮ್ಮ ದೇವಿ ದೇವಸ್ಥಾನಗಳಲ್ಲಿ ದತ್ತಿ ಇಲಾಖೆಯ ಸಿಬ್ಬಂದಿ ಮಹಿಳಾ ಭಕ್ತರಿಗೆ ಅರಿಶಿನ, ಕುಂಕುಮ ಹಚ್ಚಿ ಬಳೆ ವಿತರಿಸಿದರು.

ಹಬ್ಬದ ಅಂಗವಾಗಿ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ವಿವಿಧ ಕಡೆಗಳಿಂದ ಭಕ್ತರು ದೇವಸ್ಥಾನಗಳಿಗೆ ಬಂದು, ದೇವರ ದರ್ಶನ ಪಡೆದರು. ಮನೆ, ಮನೆಗಳಲ್ಲೂ ವರಮಹಾಲಕ್ಷ್ಮಿ ಪೂಜೆ ಶ್ರದ್ಧಾ, ಭಕ್ತಿಯಿಂದ ನೆರವೇರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.