ADVERTISEMENT

ವಿಜಯನಗರ: ಉಪರಾಷ್ಟ್ರಪತಿ ಪ್ರವಾಸ ಮುಕ್ತಾಯ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2021, 5:16 IST
Last Updated 22 ಆಗಸ್ಟ್ 2021, 5:16 IST
ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಸ್ಮರಣಿಕೆ ನೀಡಿ ಬೀಳ್ಕೊಟ್ಟರು
ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಸ್ಮರಣಿಕೆ ನೀಡಿ ಬೀಳ್ಕೊಟ್ಟರು   

ಹೊಸಪೇಟೆ (ವಿಜಯನಗರ):ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಮೂರು ದಿನಗಳ ಜಿಲ್ಲಾ ಪ್ರವಾಸ ಭಾನುವಾರ ಕೊನೆಗೊಂಡಿದೆ.

ನಗರದ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ನಲ್ಲಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಸ್ಮರಣಿಕೆ ಕೊಟ್ಟು ಬೀಳ್ಕೊಟ್ಟರು.

ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮೇಶ್ವರ, ಎಸ್ಪಿ ಸೈದುಲು ಅಡಾವತ್,ಎಎಸ್ಪಿ ಬಿ.ಎನ್.ಲಾವಣ್ಯ ಇದ್ದರು.

ADVERTISEMENT

ಮೂರು ದಿನಗಳ‌ ಪ್ರವಾಸದ ಅವಧಿಯಲ್ಲಿ ನಾಯ್ಡು ಅವರು ಪತ್ನಿ ಎಮ. ಉಷಾ ಹಾಗೂ ಕುಟುಂಬ ಸದಸ್ಯರೊಂದಿಗೆತುಂಗಾಭದ್ರಾ ಜಲಾಶಯ, ವಿಶ್ವಪ್ರಸಿದ್ಧ ಹಂಪಿಯ ವಿಶ್ವಪಾರಂಪರಿಕ ಸ್ಮಾರಕಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದ್ದರು. ಸ್ಮಾರಕಗಳ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ವಾಯುಸೇನೆಯ ವಿಶೇಷ ಹೆಲಿಕ್ಯಾಪ್ಟರ್‌ನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪಯಣ ಬೆಳೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.