ADVERTISEMENT

ತನಿಖಾ ಸಂಸ್ಥೆಗಳ ದುರ್ಬಳಕೆಯಿಂದ ಬಿಜೆಪಿಗೆ ಗೆಲುವು: ಎಚ್.ಸಿ. ಮಹದೇವಪ್ಪ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2023, 9:01 IST
Last Updated 3 ಡಿಸೆಂಬರ್ 2023, 9:01 IST
<div class="paragraphs"><p>ಡಾ. ಎಚ್.ಸಿ.ಮಹದೇವಪ್ಪ</p></div>

ಡಾ. ಎಚ್.ಸಿ.ಮಹದೇವಪ್ಪ

   

ಹೊಸಪೇಟೆ: ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿದ್ದರಿಂದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಸೋಲು ಉಂಟಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಹೇಳಿದರು.

ಭಾನುವಾರ ಇಲ್ಲಿ ಮಾಧ್ಯಮದವರಿಗೆ ಚುನಾವಣಾ ಫಲಿತಾಂಶ ಬಗ್ಗೆ ಪ್ರತಿಕ್ರಿಯಿಸಿದ ಅವರು, ತೆಲಂಗಾಣದಲ್ಲಿ ಸಹ ಇದೇ ಪ್ರಯತ್ನ ನಡೆದರೂ ಮತದಾರರು ಕಾಂಗ್ರೆಸ್ ಪಕ್ಷವನ್ನು ಕೈಹಿಡಿದರು. ಕರ್ನಾಟಕದಲ್ಲಿ ಜಾರಿಗೆ ಬಂದ ಗ್ಯಾರಂಟಿಗಳ ಪ್ರಭಾವವೂ ತೆಲಂಗಾಣದಲ್ಲಿದೆ ಎಂದರು.

ADVERTISEMENT

ರಾಜಸ್ಥಾನದಲ್ಲಿ ಆಡಳಿತ ವಿರೋಧಿ ಅಲೆ ಇರಲಿಲ್ಲ, ಆದರೂ ಕಾಂಗ್ರೆಸ್ ಸೋಲು ಕಂಡಿರುವುದು ಅಚ್ಚರಿ ತಂದಿದೆ ಎಂದರು.

ಈ ವಿಧಾನಸಭೆ ಚುನಾವಣೆ ಫಲಿತಾಂಶ ಲೋಕಸಭಾ ಚುವಾವಣೆಯ ದಿಕ್ಸೂಚಿ ಅಲ್ಲ ಎಂದ ಅವರು, ಇದೇ 6 ರಂದು ಎಐಸಿಸಿ ಅಧ್ಯಕ್ಷರು ವಿರೋಧ ಪಕ್ಷಗಳ ಸಭೆ ಕರೆದಿದ್ದು, ಮುಂದಿನ ನಡೆಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.