ADVERTISEMENT

ವಿಜಯನಗರ | ಅಪಘಾತ: ದಂಪತಿ ಸಾವು; ಮೂವರು ಮಕ್ಕಳಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 13:39 IST
Last Updated 4 ಜುಲೈ 2025, 13:39 IST
ಮರಿಯಮ್ಮನಹಳ್ಳಿ ಸಮೀಪ ಲಾರಿ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರನ್ನು ಎಸ್‌ಪಿ ಶ್ರೀಹರಿಬಾಬು ಬಿ.ಎಲ್‌.ಶುಕ್ರವಾರ ಪರಿಶೀಲಿಸಿದರು
ಮರಿಯಮ್ಮನಹಳ್ಳಿ ಸಮೀಪ ಲಾರಿ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರನ್ನು ಎಸ್‌ಪಿ ಶ್ರೀಹರಿಬಾಬು ಬಿ.ಎಲ್‌.ಶುಕ್ರವಾರ ಪರಿಶೀಲಿಸಿದರು   

ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಪಟ್ಟಣದ ಹೊರವಲಯದ ಕೆಪಿಟಿಸಿಎಲ್ ಕಚೇರಿ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ಮಧ್ಯರಾತ್ರಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ದಂಪತಿ ಮೃತಪಟ್ಟಿದ್ದಾರೆ. ಮೂವರು ಮಕ್ಕಳಿಗೆ ಗಾಯಗಳಾಗಿವೆ.

‘ಬಾಗಲಕೋಟೆ ಜಿಲ್ಲೆ ಚೆಟ್ನಿಹಾಳು ಗ್ರಾಮದ ಕ್ಯಾಬ್ ಚಾಲಕ ಮುತ್ತಪ್ಪ ಪೂಜಾರ್ (35), ಅವರ ಪತ್ನಿ ರೇಣುಕಾ (30) ಮೃತರು. ಅವರ ಮಕ್ಕಳಾದ ಅನುಶ್ರೀ (9), ರೂಪಶ್ರೀ (6) ಮತ್ತು ಖುಷಿ (4) ಎಂಬುವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೆಂಗಳೂರಿನಲ್ಲಿ ವಾಸವಿದ್ದ ಮುತ್ತಪ್ಪ, ಮೊಹರಂ ಹಬ್ಬದ ಪ್ರಯುಕ್ತ ಸ್ವಗ್ರಾಮ  ಚೆಟ್ನಿಹಾಳು ಗ್ರಾಮಕ್ಕೆ ಹೋಗುತ್ತಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT