ನ್ಯಾಯಾಲಯ ತೀರ್ಪು
ಹೊಸಪೇಟೆ: ‘ವಿಜಯನಗರ ಜಿಲ್ಲೆ ರಚನೆಯಾಗಿ ನಾಲ್ಕು ವರ್ಷವಾದ ಬಳಿಕ ಜಿಲ್ಲಾ ನ್ಯಾಯಾಲಯ ಮಂಜೂರಾಗಿದೆ’ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಪ್ರಹ್ಲಾದ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
‘ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೆಪ್ಟೆಂಬರ್ 27ರಂದು ಕಾರ್ಯಾರಂಭ ಮಾಡಲಿದ್ದು. ಬಳ್ಳಾರಿಯಲ್ಲಿನ 1,800 ಪ್ರಕರಣಗಳು ಇಲ್ಲಿಗೆ ವರ್ಗಾವಣೆಗೊಳ್ಳಲಿವೆ. ಜಿಲ್ಲಾ ನ್ಯಾಯಾಲಯಕ್ಕೆ ಅಗತ್ಯ ಇರುವ 57 ಸಿಬ್ಬಂದಿ ಹೊಂದಿಸಲಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.