ಹೊಸಪೇಟೆ: ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭವಾಗಿ ಐದು ದಿನಗಳಲ್ಲಿ ಜಿಲ್ಲೆಯಲ್ಲಿ 6,808 ಮನೆಗಳಲ್ಲಿ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
‘ಜಿಲ್ಲೆಯಲ್ಲಿ 3.30 ಲಕ್ಷ ಮನೆಗಳಿವೆ. 3,322 ಮಂದಿ ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ. ತಾಂತ್ರಿಕ ಸಮಸ್ಯೆಗಳು ನಿವಾರಣೆಯಾಗತೊಡಗಿವೆ. ಅ.7ರೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕೆಂದು ಶುಕ್ರವಾರ ನಡೆದ ವಿಡಿಯೊ ಕಾನ್‌ಫರೆನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಸಮೀಕ್ಷೆ ವೇಗ ಪಡೆಯುವ ವಿಶ್ವಾಸ ಇದ್ದು, ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರ್ಣಗೊಳ್ಳಬಹುದು’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.