ADVERTISEMENT

ಸರ್ಕಾರಿ ನೌಕರರ ಸಂಘ: ಅಂಜಿನಪ್ಪ ಉಪಾಧ್ಯಕ್ಷ,ಮರಿಯಪ್ಪ ಸಂಘಟನಾ ಕಾರ್ಯದರ್ಶಿ

ವಿಜಯನಗರ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2025, 4:11 IST
Last Updated 5 ಅಕ್ಟೋಬರ್ 2025, 4:11 IST
ಕೆ.ಅಂಜಿನಪ್ಪ
ಕೆ.ಅಂಜಿನಪ್ಪ   

ಹರಪನಹಳ್ಳಿ: ವಿಜಯನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಹಿರಿಯ ಉಪಾಧ್ಯಕ್ಷರಾಗಿ ಆಶ್ರಯ ಕಾಲೊನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ಅಂಜಿನಪ್ಪ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಅರಸನಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ಮರಿಯಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಗೌಡ್ರು ತಿಳಿಸಿದ್ದಾರೆ.

ಆಯ್ಕೆ ಸಮಿತಿ ಸಭೆಯಲ್ಲಿ ರಾಜ್ಯ ಪರಿಷತ್ ಸದಸ್ಯ ರಾಘವೇಂದ್ರ, ಖಜಾಂಚಿ ಮಲ್ಲೇಶಪ್ಪ, ಜಿಲ್ಲಾ ಕಾರ್ಯದರ್ಶಿ ಪಂಪಣ್ಣ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಬಸವರಾಜ್ ಇದ್ದರು.

ಆಯ್ಕೆಯಾದ ಶಿಕ್ಷಕರನ್ನು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಜಿ.ಮನೋಹರ, ರಾಜ್ಯ ಪರಿಷತ್ ಸದಸ್ಯರಾದ ಎಂ.ಷರೀಪ್, ಪೂಜಾರ ಮಂಜುನಾಥ್, ಗೌರವ ಅಧ್ಯಕ್ಷ ಎನ್.ಟಿ.ಸೋಮಪ್ಪ, ಕಾರ್ಯದರ್ಶಿ ಸೂರ್ಯನಾಯ್ಕ, ಗುರುಮೂರ್ತಿ, ಗಿರಿರಾಜ್, ಹುಸೇನ್ ಭಾಷ ಅಭಿನಂದಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.