ಹೊಸಪೇಟೆ: 2025-26ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕೆ.ಬಿ.ರಾಮಚಂದ್ರಪ್ಪ ತಿಳಿಸಿದ್ದಾರೆ.
ಜೂನ್ 16ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ ಸಹಾಯವಾಣಿ 8050770004 ಅಥವಾ 8050770005 ಇಲ್ಲಿಗೆ ಕರೆ ಮಾಡಬಹುದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.