ADVERTISEMENT

ವಿಜಯನಗರ | ಸಿಲಿಂಡರ್‌ ಸ್ಪೋಟ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 18:53 IST
Last Updated 3 ಅಕ್ಟೋಬರ್ 2025, 18:53 IST
ಹಾಲಪ್ಪ
ಹಾಲಪ್ಪ   

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಗಾದಿಗನೂರಿನಲ್ಲಿ ಈಚೆಗೆ ಸಂಭವಿಸಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ‘ವಕೀಲ ಹಾಲಪ್ಪ (43), ಅವರ ತಾಯಿ ಗಂಗಮ್ಮ(80) ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ.

ಅವಘಡದಲ್ಲಿ ಒಟ್ಟು 11 ಜನರು ಗಾಯಗೊಂಡಿದ್ದರು.ಹಾಲಪ್ಪ ಅವರ ಪತ್ನಿ ಕವಿತಾ (35) ಅವರ ಸ್ಥಿತಿ ಈಗಲೂ ಗಂಭೀರವಾಗಿದೆ’ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್‌ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ADVERTISEMENT

‘ಮೃತರ ಕುಟುಂಬದವರಿಗೆ ಸರ್ಕಾರದಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಹಾನಿಗೊಂಡ ಮನೆಯನ್ನು ವೈಯಕ್ತಿಕವಾಗಿ ದುರಸ್ತಿ ಮಾಡಿಸಿಕೊಡಲಾಗುವುದು’ ಎಂದರು.

ಗಂಗಮ್ಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.