ADVERTISEMENT

ಮೊದಲ ದಿನವೇ ಬಿಡುವಿಲ್ಲದೆ ಓಡಾಟ: ನಗರಕ್ಕೆ ಬಂದ ವಿಶೇಷ ಅಧಿಕಾರಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 12:50 IST
Last Updated 1 ಮಾರ್ಚ್ 2021, 12:50 IST
ಟಿಎಸ್‌ಪಿ ನಕ್ಷೆ ವೀಕ್ಷಿಸಿದ ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿ ಪಿ. ಅನಿರುದ್ಧ ಶ್ರವಣ್‌. ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್‌ ಎಚ್‌. ವಿಶ್ವನಾಥ್‌, ಕಂದಾಯ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನಗೌಡ ಇದ್ದಾರೆ.
ಟಿಎಸ್‌ಪಿ ನಕ್ಷೆ ವೀಕ್ಷಿಸಿದ ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿ ಪಿ. ಅನಿರುದ್ಧ ಶ್ರವಣ್‌. ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್‌ ಎಚ್‌. ವಿಶ್ವನಾಥ್‌, ಕಂದಾಯ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನಗೌಡ ಇದ್ದಾರೆ.   

ವಿಜಯನಗರ (ಹೊಸಪೇಟೆ): ವಿಜಯನಗರ ಜಿಲ್ಲೆಗೆ ವಿಶೇಷ ಅಧಿಕಾರಿಯಾಗಿ ನೇಮಕಗೊಂಡಿರುವ ಪಿ. ಅನಿರುದ್ಧ ಶ್ರವಣ್‌ ಅವರು ಸೋಮವಾರ ನಗರಕ್ಕೆ ಬಂದ ಮೊದಲ ದಿನವೇ ಬಿಡುವಿಲ್ಲದಂತೆ ವಿವಿಧ ಇಲಾಖೆಯ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 3ಕ್ಕೆ ನಗರಕ್ಕೆ ಬಂದ ಅವರು, ತುಂಗಭದ್ರಾ ಜಲಾಶಯದ ವೈಕುಂಠ ಅತಿಥಿ ಗೃಹದಲ್ಲಿ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರೊಂದಿಗೆ ಕೆಲಕಾಲ ಚರ್ಚಿಸಿದರು.

ಬಳಿಕ ಜಿಲ್ಲಾಡಳಿತ ಭವನ ನಿರ್ಮಿಸಲು ಉದ್ದೇಶಿಸಿರುವ ತುಂಗಭದ್ರಾ ಸ್ಟೀಲ್ಸ್‌ ಪ್ರಾಡಕ್ಟ್ಸ್‌ (ಟಿಎಸ್‌ಪಿ) ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿನ ಹಳೆಯ ಕಟ್ಟಡ ವೀಕ್ಷಿಸಿದರು.

ADVERTISEMENT

ನಂತರ ನಗರಾಭಿವೃದ್ಧಿ ಪ್ರಾಧಿಕಾರ, ನಗರಸಭೆ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿನ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.