
ಪ್ರಜಾವಾಣಿ ವಾರ್ತೆ
ಹೊಸಪೇಟೆ: ಜಿಲ್ಲೆಯಾದ್ಯಂತ ಕಾಗದರಹಿತ ನೋಂದಣಿಗೆ ಆಯಾ ಉಪನೋಂದಣಿ ಕಚೇರಿಯ ವ್ಯಾಪ್ತಿಯಲ್ಲಿ ಫೆ. 2 ಮತ್ತು 3ರಂದು ತರಬೇತಿ ಹಮ್ಮಿಕೊಳ್ಳಲಾಗಿದೆ.
ಫೆ. 2ರಂದು ಬೆಳಿಗ್ಗೆ 11ಕ್ಕೆ ಕೂಡ್ಲಿಗಿ, ಮಧ್ಯಾಹ್ನ 2ಕ್ಕೆ ಹರಪನಹಳ್ಳಿ, ಸಂಜೆ 4.30ಕ್ಕೆ ಹಗರಿಬೊಮ್ಮನಹಳ್ಳಿ ಉಪನೋಂದಣಿ ಕಚೇರಿಯಲ್ಲಿ ತರಬೇತಿ ಏರ್ಪಡಿಸಲಾಗಿದೆ.
ಫೆ. 3ರಂದು ಮಧ್ಯಾಹ್ನ 12ಕ್ಕೆ ಹೂವಿನಹಡಗಲಿ ಹಾಗೂ ಮಧ್ಯಾಹ್ನ 3ಕ್ಕೆ ಹೊಸಪೇಟೆ ಉಪನೋಂದಣಿ ಕಚೇರಿಯಲ್ಲಿ ತರಬೇತಿ ಆಯೋಜಿಸಲಾಗಿದೆ. ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳ ಸಿಬ್ಬಂದಿ, ಕಾಗದರಹಿತ ನೋಂದಣಿ ವ್ಯವಸ್ಥೆಯಲ್ಲಿ ಆಸಕ್ತಿ ಹೊಂದಿರುವ ಇತರ ಸಾರ್ವಜನಿಕರು ತರಬೇತಿಗೆ ಹಾಜರಾಗಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.