
ಪ್ರಜಾವಾಣಿ ವಾರ್ತೆ
ಹೊಸಪೇಟೆ: ತಾಲ್ಲೂಕಿನ ಕಮಲಾಪುರದ ಸರ್ಕಾರಿ ಆಸ್ಪತ್ರೆ ಬಳಿಯ ಖಾಲಿ ಜಾಗದಲ್ಲಿ ಹಳ್ಳಿಕೆರೆ ಬಳಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಬೊಲೆರೊ ವಾಹನದಲ್ಲಿ ಸಾಗಿಸಲು ಯತ್ನಿಸುತ್ತಿದ್ದನ್ನು ಪತ್ತೆಹಚ್ಚಲಾಗಿದೆ.
68.51 ಕ್ವಿಂಟಲ್ ತೂಕದ 221 ಮೂಟೆ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ವಾಹನ ಸಮೇತ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಕಮಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಆಹಾರ ಇಲಾಖೆಯ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.