ADVERTISEMENT

ವಿಜಯನಗರ: ಸೂರ್ಯಕಾಂತಿ, ಶೇಂಗಾ ಖರೀದಿ ಕೇಂದ್ರ ಪ್ರಾರಂಭ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 6:05 IST
Last Updated 4 ನವೆಂಬರ್ 2025, 6:05 IST
<div class="paragraphs"><p>ರೈತರು ಸೂರ್ಯಕಾಂತಿ ಒಕ್ಕಣೆ ನಡೆಸುತ್ತಿರುವುದು.</p></div>

ರೈತರು ಸೂರ್ಯಕಾಂತಿ ಒಕ್ಕಣೆ ನಡೆಸುತ್ತಿರುವುದು.

   

ಹೊಸಪೇಟೆ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಶೇಂಗಾ ಮತ್ತು ಸೂರ್ಯಕಾಂತಿ ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಶೇಂಗಾ ಮತ್ತು ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಶೇಂಗಾವನ್ನು ಪ್ರತಿ ಕ್ವಿಂಟಲ್‌ಗೆ ₹7,263 ಹಾಗೂ ಸೂರ್ಯಕಾಂತಿ ₹7,721ರಂತೆ ನಿಗದಿಪಡಿಸಲಾಗಿದೆ. ರೈತರಿಂದ ಖರೀದಿಗಾಗಿ ವಿಜಯನಗರ ಜಿಲ್ಲೆಯ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳಲ್ಲಿ ಎಲ್ಲಾ ತಾಲ್ಲೂಕುಗಳ ಖರೀದಿ ಕೇಂದ್ರ ತೆರೆಯಲಾಗಿದೆ.

ADVERTISEMENT

ಮಾಹಿತಿಗೆ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ ವಿಭಾಗೀಯ ಕಚೇರಿ ವಿಜಯನಗರ ಜಿಲ್ಲೆಯ ಅಧಿಕಾರಿ ಅಯ್ಯಪ್ಪ ಡಂಬಾಳ ಮೊ.8073797774 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.