ADVERTISEMENT

ಗಣೇಶ ವಿಸರ್ಜನೆಯಲ್ಲಿ ನಿಯಮ ಮೀರಿ ಡಿ.ಜೆ ಬಳಕೆ; ಆರು ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2022, 7:30 IST
Last Updated 3 ಸೆಪ್ಟೆಂಬರ್ 2022, 7:30 IST
ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ವಶಪಡಿಸಿಕೊಂಡಿರುವ ಡಿ.ಜೆ
ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ವಶಪಡಿಸಿಕೊಂಡಿರುವ ಡಿ.ಜೆ   

ಹೊಸಪೇಟೆ (ವಿಜಯನಗರ): ಗಣೇಶನ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಡಿ.ಜೆ ಬಳಸಿದ್ದಕ್ಕೆ ಜಿಲ್ಲೆಯ ಆರು ಗಣೇಶನ ಮಂಡಳಿಗಳ ವಿರುದ್ಧ ಶನಿವಾರ ಪೊಲೀಸರು ಪ್ರಕರಣ ದಾಖಲಿಸಿ, ವಾಹನಗಳೊಂದಿಗೆ ಡಿ.ಜೆ. ವಶಪಡಿಸಿಕೊಂಡಿದ್ದಾರೆ.

ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು, ಗ್ರಾಮೀಣ ಠಾಣೆ, ಬಡಾವಣೆ ಪೊಲೀಸ್ ಠಾಣೆ ಹಾಗೂ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ತಂಬ್ರಹಳ್ಳಿ ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ಶುಕ್ರವಾರ ತಡರಾತ್ರಿ ಮೂರನೇ ದಿನನಿಯಮ ಮೀರಿ ಡಿ.ಜೆಯೊಂದಿಗೆ ಗಣಪನ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಐದನೇ ದಿನದ ವಿಸರ್ಜನೆ ವೇಳೆಯೂ ಯಾರು ಕೂಡ ನಿಯಮ ಉಲ್ಲಂಘಿಸಬಾರದು. ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.