
ಸಾಂದರ್ಭಿಕ ಚಿತ್ರ
ಹೊಸಪೇಟೆ: 2025-26ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಮೂಲಕ ಉದ್ಯೋಗಿನಿ ಯೋಜನೆ ಮತ್ತು ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಡಿ ಸಹಾಯಧನಕ್ಕಾಗಿ ಅನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು, ಜ.15ರವರೆಗೆ ಅವಕಾಶ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಎಸ್.ಶ್ವೇತಾ ತಿಳಿಸಿದ್ದಾರೆ.
ಈ ಎಲ್ಲಾ ಯೋಜನೆಗಳಿಗೆ ಭೌತಿಕ ಮತ್ತು ಆರ್ಥಿಕ ಗುರಿ ನಿಗದಿಪಡಿಸಿದ್ದು, ಯೋಜನೆಗಳಿಗೆ ಮಹಿಳಾ ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಹಿಂದಿನ ಬಾರಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವಂತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.