ADVERTISEMENT

ವಾಂತಿಭೇದಿ: ಅಸ್ವಸ್ಥ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 16:28 IST
Last Updated 24 ಜೂನ್ 2025, 16:28 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಹೂವಿನಹಡಗಲಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಮಾನ್ಯರಮಸಲವಾಡ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಕೊರವರ ಹುಲಿಗೆಮ್ಮ (54) ಸೋಮವಾರ ರಾತ್ರಿ ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ADVERTISEMENT

ಕಲುಷಿತ ನೀರು ಸೇವನೆಯಿಂದ ಕಳೆದ ವಾರ ಅವರಿಗೆ ವಾಂತಿಭೇದಿ ಕಾಣಿಸಿಕೊಂಡಿತ್ತು. ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಹುಲಿಗೆಮ್ಮ ಗುಣಮುಖರಾಗಿದ್ದರು. ಭಾನುವಾರ ಮತ್ತೆ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಗದಗ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರಿಗೆ ಪಾರ್ಶ್ವವಾಯು ಉಂಟಾಗಿ ಮೃತಪಟ್ಟರು ಎಂದು ವೈದ್ಯರು ತಿಳಿಸಿದ್ದಾರೆ.

ಕೊಳವೆಬಾವಿ ಹಾಗೂ ಪೈಪ್ ಲೈನ್ ನಲ್ಲಿ ಕಲುಷಿತ ನೀರು ಮಿಶ್ರಣಗೊಂಡು ಭೋವಿಕಾಲೊನಿ, ಕುರುಬರ ಓಣಿಯ ನಿವಾಸಿಗಳಲ್ಲಿ ವಾಂತಿಭೇದಿ ಉಲ್ಬಣಿಸಿತ್ತು. ಒಂದು ವಾರದ ಅವಧಿಯಲ್ಲಿ 60 ಜನರು ವಾಂತಿಭೇದಿಯಿಂದ ಅಸ್ವಸ್ಥರಾಗಿದ್ದರು. ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಇನ್ನೂ ಇಬ್ಬರು ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.