ADVERTISEMENT

ಹೂವಿನಹಡಗಲಿ | ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2023, 10:37 IST
Last Updated 2 ಏಪ್ರಿಲ್ 2023, 10:37 IST
   

ಹೂವಿನಹಡಗಲಿ (ವಿಜಯನಗರ) : ಪಟ್ಟಣದಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡುವ ವೇಳೆ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಕಟ್ಟಡ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ.

ಹಾವನೂರು ದಾದಾಪೀರ್ (36) ಮೃತರು. ಪಟ್ಟಣದ ಕಾಯಕ ನಗರದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಕೆಲಸ ಮಾಡುವ ವೇಳೆ ಕಾರ್ಮಿಕ ದಾದಾಪೀರ್ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳಿಸಿಕೊಡಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT