ADVERTISEMENT

ಲಲಿತಕಲೆಗಳನ್ನು ಯುವಕರು ಮೈಗೂಡಿಸಿಕೊಳ್ಳಲಿ: ಎಂ. ಗೋವಿಂದ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 13:35 IST
Last Updated 9 ನವೆಂಬರ್ 2021, 13:35 IST
ಹೊಸಪೇಟೆಯಲ್ಲಿ ಸೋಮವಾರ ಸಂಜೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚಿಣ್ಣರು ಸಮೂಹ ನೃತ್ಯ ಪ್ರಸ್ತುತಪಡಿಸಿದರು
ಹೊಸಪೇಟೆಯಲ್ಲಿ ಸೋಮವಾರ ಸಂಜೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚಿಣ್ಣರು ಸಮೂಹ ನೃತ್ಯ ಪ್ರಸ್ತುತಪಡಿಸಿದರು   

ಹೊಸಪೇಟೆ (ವಿಜಯನಗರ): ‘ಕಲಾವಿದರು ತಮ್ಮ ಬದುಕಿನಲ್ಲಿ ಸಂಕಷ್ಟವಿದ್ದರೂ ಜನಮನ ರಂಜಿಸುವುದನ್ನು ಬಿಡುವುದಿಲ್ಲ. ಇಂದಿನ ಯುವ ಪೀಳಿಗೆ ಕೂಡ ಆ ಲಲಿತಕಲೆಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದ ಮುಖ್ಯಸ್ಥ ಎಂ. ಗೋವಿಂದ ತಿಳಿಸಿದರು.

ನಗರದಲ್ಲಿ ಸೋಮವಾರ ಸಂಜೆ ಗಾನಗಂಗಾ ಕಲಾ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯ ವಿಶೇಷ ಘಟಕ ಯೋಜನೆಯಡಿ ಏರ್ಪಡಿಸಿದ್ದ ಸಾಂಸ್ಕೃತಿಕೋತ್ಸವದಲ್ಲಿ ಮಾತನಾಡಿದರು.

‘ಸರ್ಕಾರವು ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಕಲಾವಿದರು ಇದರ ಸದುಪಯೋಗ ಪಡಿಸಿಕೊಂಡು ಸಾಧನೆ ಮಾಡಬೇಕು’ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಮಗ ಸಿದ್ದಾರ್ಥ ಸಿಂಗ್‌, ‘ಲಲಿತಕಲೆಗಳಲ್ಲಿ ಸಂಗೀತಕ್ಕೆ ಅಗ್ರ ಸ್ಥಾನವಿದೆ. ಸಂಗೀತ ಕಾರ್ಯಕ್ರಮಗಳು ಜನಮನ ರಂಜಿಸುತ್ತವೆ’ ಎಂದರು.

ADVERTISEMENT

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮರಿಯಮ್ಮನಹಳ್ಳಿಯ ಡಾ.ಬಿ.ಅಂಬಣ್ಣ ಹಾಗೂ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಜಂಬಯ್ಯ ನಾಯಕ ಅವರನ್ನು ಸನ್ಮಾನಿಸಲಾಯಿತು. ನಂತರ ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಗಾನಗಂಗ ಕಲಾ ಪ್ರತಿಷ್ಠಾನದ ಅಧ್ಯಕ್ಷ ಯಲ್ಲಪ್ಪ ಭಂಡರ್‌ದಾರ್‌, ಎಚ್.ಹನುಮಂತಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.