ADVERTISEMENT

ಅನುದಾನ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2018, 6:08 IST
Last Updated 16 ಮಾರ್ಚ್ 2018, 6:08 IST

ವಿಜಯಪುರ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿಯ ಅನುದಾನವನ್ನು ಶೇಕಡಾ ನೂರರಷ್ಟು ಬಳಸುವ ಜತೆಗೆ ಸೂಕ್ತ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಶೆಟ್ಟೆಣ್ಣನವರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯಡಿ ಸಾಧಿಸಿದ ಪ್ರಗತಿಯ ಪರಿಶೀಲನಾ ಸಭೆ ನಡೆಸಿದ ಅವರು, ಈ ಯೋಜನೆಯಡಿ ಶೇಕಡಾ ನೂರರಷ್ಟು ಅನುದಾನ ಸಮರ್ಪಕವಾಗಿ ಬಳಕೆಯಾಗುವ ಜತೆಗೆ ಭೌತಿಕ ಪ್ರಗತಿಯನ್ನು ಸಾಧಿಸಬೇಕು. ಅದರಂತೆ ಅರ್ಹ ಫಲಾನುಭವಿಗಳಿಗೆ ಅವಶ್ಯಕ ಸೌಲಭ್ಯವನ್ನು ತಪ್ಪದೇ ದೊರೆಯುವಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಗುರಿಗೆ ತಕ್ಕಂತೆ ಸೂಕ್ತ ಪ್ರಗತಿ ಸಾಧಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಮಂಜೂರಾಗಿರುವ ಅನುದಾನ ಬಾಕಿ ಉಳಿಯದಂತೆ ನೋಡಿಕೊಳ್ಳಬೇಕು. ಆಯಾ ಇಲಾಖೆಗಳ ವ್ಯಾಪ್ತಿಯ ಸಿಬ್ಬಂದಿಗಳ ಮೇಲೆ ನಿಗಾ ಇಟ್ಟು ಸಮರ್ಪಕವಾಗಿ ಅನುದಾನ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ ಅಧಿಕಾರಿಗಳ ವಿರುದ್ಧ ಪ್ರಕರಣ ಸಹ ದಾಖಲಿಸಲು ಕಾಯ್ದೆಯಡಿ ಅವಕಾಶವಿದ್ದು, ಯಾವುದೇ ಲೋಪಕ್ಕೆ ಅವಕಾಶ ನೀಡದೇ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ADVERTISEMENT

ಪ್ರಗತಿ ಸಾಧಿಸಿರುವ ಕುರಿತಂತೆ ಆಯಾ ಇಲಾಖೆಗಳು ನಿಗದಿತ ನಮೂನೆಯಲ್ಲಿ ಏಪ್ರಿಲ್ ಒಂದನೇ ವಾರದಲ್ಲಿ ವರದಿ ನೀಡುವಂತೆ ತಿಳಿಸಿದ ಅವರು, ಆರ್ಥಿಕ ಮತ್ತು ಭೌತಿಕ ಸಾಧನೆಯಲ್ಲಿ ಕಡಿಮೆ ಪ್ರಗತಿ ಮಾಡಿರುವ ಆಧಾರದ ಮೇಲೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ಮುಂಬರುವ ದಿನಗಳಲ್ಲಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಇದೇ ಸಂದರ್ಭ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಸ್ವಾಗತಿಸಿದರು. ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.