ಸಿಂದಗಿ: ಪರಿಸರ ರಕ್ಷಣೆ ಪ್ರತಿಯೊಬ್ಬ ವ್ಯಕ್ತಿಯ ಆದ್ಯ ಕರ್ತವ್ಯ. ಪರಿಸರ ನಾಶಗೊಂಡರೆ ಇಡೀ ಮನುಕುಲವೇ ನಾಶವಾದಂತೆ ಎಂದು ಸಾಮಾಜಿಕ ಅರಣ್ಯ ಇಲಾಖೆ ಅರಣ್ಯಾಧಿಕಾರಿ ಎ.ಎಸ್. ನೇಗಿನಾಳ ಅಭಿಪ್ರಾಯಪಟ್ಟರು.
ಪಟ್ಟಣದ ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಸುರಭಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಕ್ಲಬ್ ಕಲ್ಯಾಣ ನಗರ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಲಾ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯ ಬೇಕಿದೆ ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಅಧ್ಯಕ್ಷ ಮಹಿಪತಿ ದೇಸಾಯಿ ಪಟ್ಟಣದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿ ಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಕಾರ್ಯ ಕೈಗೆತ್ತಿಕೊಳ್ಳುವುದರ ಜೊತೆಗೆ ಶಾಲಾ ಆವರಣದಲ್ಲಿ ಗಿಡಗಳನ್ನು ಬೆಳೆ ಸುವ ಯೋಜನೆ ರೋಟರಿ ಸಂಸ್ಥೆ ಹಾಕಿ ಕೊಂಡಿದೆ ಎಂದು ಮಾತನಾಡಿದರು.
ವಿದ್ಯಾಚೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶರದ ನಾಡಗೌಡ ಅತಿಥಿಗಳಾಗಿದ್ದರು. ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ಡಾ.ಗಿರೀಶ ಕುಲಕರ್ಣಿ, ಡಾ.ಮಹಾಂತೇಶ ಹಿರೇಮಠ, ಡಾ.ಪ್ರಕಾಶ ಉಪ್ಪಿನ, ಡಾ.ಸಂಗಮೇಶ ಪಾಟೀಲ, ಕಲಕೇರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಲ್ಲೂ ಬಿರಾದಾರ, ಡಾ.ಚಂದ್ರ ಶೇಖರ ಹಿರೇಗೌಡರ ಪಾಲ್ಗೊಂಡಿದ್ದರು.
ರೋಟರಿ ಸಂಸ್ಥೆಯ ಕಾರ್ಯದರ್ಶಿ ಡಾ.ಸುನೀಲ ಪಾಟೀಲ ಸ್ವಾಗತಿಸಿದರು. ಡಾ.ಮಹಾಂತೇಶ ಹಿರೇಮಠ ನಿರೂಪಿಸಿದರು. ನಾಗರಾಜ ಕಲಬುರ್ಗಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.