ADVERTISEMENT

ಪ್ರಗತಿ ಪಥದಲ್ಲಿ ಮಹಿಳಾ ವಿವಿ: ಶ್ಲಾಘನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2012, 5:30 IST
Last Updated 11 ಜನವರಿ 2012, 5:30 IST

ವಿಜಾಪುರ: `ಇಲ್ಲಿಯ ಮಹಿಳಾ ವಿಶ್ವವಿದ್ಯಾಲಯ ಪ್ರಗತಿ ಪಥದಲ್ಲಿ ದಾಪುಗಾಲು ಹಾಕುತ್ತಿದ್ದು, ಹೆಚ್ಚಿನ ಅನುದಾನ ನೀಡಿ ವಿಶ್ವವಿದ್ಯಾಲಯ ವನ್ನು ಸಬಲೀಕರಣ ಗೊಳಿಸುವ ಪ್ರಯತ್ನಗಳೂ ನಡೆದಿವೆ~ ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೇಳಿದರು.

ಇಲ್ಲಿಯ ಮಹಿಳಾ ವಿಶ್ವವಿದ್ಯಾಲ ಯದ ಜ್ಞಾನಶಕ್ತಿ ಆವರಣದಲ್ಲಿ `ಕೌಶಲ್ಯ ಮಹಿಳಾ ತಂತ್ರಜ್ಞಾನ ಪಾರ್ಕ್~ನ್ನು ಮಂಗಳವಾರ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

`ನಾನು ಉನ್ನತ ಶಿಕ್ಷಣ ಸಚಿವ ನಾಗಿದ್ದಾಗ ಈ ಮಹಿಳಾ ವಿವಿಗೆ ಭೇಟಿ ನೀಡಿದ್ದೆ. ಆಗ ಈ ಮಹಿಳಾ ವಿಶ್ವವಿದ್ಯಾಲಯ ಅನೇಕ ಸಮಸ್ಯೆ ಯಿಂದ ಬಳಲುತ್ತಿತ್ತು. ಶೈಕ್ಷಣಿಕ ಸಮಸ್ಯೆಯೂ ಇತ್ತು. ಬಾಲ್ಯಾವಸ್ಥೆ ಯಲ್ಲಿಯೇ ಅನೇಕ ಕಾಯಿಲೆಗೆ ತುತ್ತಾಗಿತ್ತು. ಈಗ ಆ ಕಾಯಿಲೆಗಳೆಲ್ಲ ವಾಸಿಯಾಗಿವೆ. ಸಮರ್ಥ ಕುಲಪತಿ ಪ್ರೊ.ಗೀತಾ ಬಾಲಿ ಅವರ ನೇತೃತ್ವದಲ್ಲಿ ವಿಶ್ವವಿದ್ಯಾಲಯ ಸಾಕಷ್ಟು ಪ್ರಗತಿಯಾಗಿದೆ~ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

`ಪ್ರಾದೇಶಿಕ ಅಸಮತೋಲನ ನಿವಾರಣೆಯ ಉದ್ದೇಶದಿಂದಲೇ ವಿಜಾಪುರದಲ್ಲಿ ಮಹಿಳಾ ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ. ಇದರ ಉದ್ದೇಶ ಈಡೇರಲೇಬೇಕು. ಅದು ಈಡೇರುತ್ತದೆ ಎಂಬ ಆಶಾಭಾವ ನನ್ನದು~ ಎಂದು ವಿವಿಯ ವ್ಯಾಪ್ತಿ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.