ವಿಜಾಪುರ: ಬಾಲ್ಯ ವಿವಾಹದ ಅನಾಹುತಗಳ ಬಗೆಗೆ ಗ್ರಾಮೀಣ ಪ್ರದೇಶದ ಜನತೆಯಲ್ಲಿ ಜಾಗೃತಿ ಮೂಡಿಸಲು ವಿದ್ಯಾರ್ಥಿನಿಯರು ಶ್ರಮಿಸಬೇಕು ಎಂದು ಉಜ್ವಲ ಸಂಸ್ಥೆಯ ನಿರ್ದೇಶಕ ವಾಸುದೇವ್ ತೋಳಬಂದಿ ಸಲಹೆ ನೀಡಿದರು.
ಉಜ್ವಲ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆಯ ಸಹಯೋಗದಲ್ಲಿ ಇಲ್ಲಿಯ ಮಹಿಳಾ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ `ಬಾಲ್ಯ ವಿವಾಹ ಅನಿಷ್ಠ ಪದ್ಧತಿ ವಿರುದ್ಧ ಅರಿವು~ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದರು.
ಸಹಾಯಕ ಪ್ರಾಧ್ಯಾಪಕ ಡಾ.ರಮೇಶ ಸೋನಕಾಂಬಳೆ, ಬಾಲ್ಯ ವಿವಾಹದ ಸ್ಥಿತಿಗತಿ ವಿವರಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರೊ.ಎಸ್.ಎ. ಖಾಜಿ, ಇಂದು ಮಹಿಳೆಯರಿಗೆ ಕಾಡುತ್ತಿರುವ ಸಮಸ್ಯೆಗಳಲ್ಲಿ ಬಾಲ್ಯ ವಿವಾಹ ಪ್ರಮುಖ ಕಾರಣವಾಗಿದೆ. ಉತ್ತರ ಕರ್ನಾಟಕದಲ್ಲಿ ಮಹಿಳೆಯರ ಸಂಖ್ಯೆ ಇಳಿಮುಖವಾಗುತ್ತಿದೆ. ಪ್ರತಿಯೊಬ್ಬರು ಮೊದಲು ನಾವು ಮನೆಯಲ್ಲಿ ಹಾಗೂ ನಮ್ಮ ನಮ್ಮ ಗ್ರಾಮಗಳಲ್ಲಿ ಬಾಲ್ಯವಿವಾಹ ತಡೆಯಲು ಕಂಕಣಬದ್ಧರಾಗಬೇಕು ಎಂದರು.
ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಓಂಕಾರ ಕಾಕಡೆ, ಉಜ್ವಲ ಸಂಸ್ಥೆಯ ಸಂಯೋಜಕ ಯಮನಪ್ಪ ಎಂ. ವೇದಿಕೆಯಲ್ಲಿದ್ದರು. ಮಂಜುಳಾ ಅರೇಬಳ್ಳಿ ಸ್ವಾಗತಿಸಿದರು. ಛಾಯಾ ಕುಂಬಾರ ವಂದಿಸಿದರು. ನಾಗರತ್ನಾ ನಾಯಕ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.