ADVERTISEMENT

ವಿಜಾಪುರಕ್ಕೆ ರಾಹುಲ್ ಗಾಂಧಿ: ಇಂದು ಸಭೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2011, 7:30 IST
Last Updated 18 ಏಪ್ರಿಲ್ 2011, 7:30 IST

ವಿಜಾಪುರ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದ ರಾಹುಲ್ ಗಾಂಧಿ ಏ.20ರಂದು ವಿಜಾಪುರಕ್ಕೆ ಭೇಟಿ ನೀಡಲಿದ್ದಾರೆ. ವಿಷಯ ತಿಳಿದು ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿದೆ.
ವಿಜಾಪುರ ಸೇರಿದಂತೆ ಸುತ್ತಲಿನ ಜಿಲ್ಲೆಗಳ ಯುವ ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತರೊಂದಿಗೆ ರಾಹುಲ್ ನಗರದಲ್ಲಿ ಸಂವಾದ ನಡೆಸಲಿದ್ದಾರೆ. ಭಾನುವಾರವಷ್ಟೇ ಈ ಕುರಿತು ಸಂದೇಶ ಬಂದಿದೆ. ಸಂದೇಶ ಬಂದ ತಕ್ಷಣ ವಿಜಾಪುರಕ್ಕೆ ಆಗಮಿಸಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕ್ರಮ ಸಂಯೋಜಕ ವಿಶಾಲ ಮುತ್ತೇಮವಾರ್ ಅವರು ರಾಹುಲ್ ಕಾರ್ಯಕ್ರಮ ಕುರಿತು ಸಮಾಲೋಚನೆ ನಡೆಸಿದರು. ಶಾಸಕ ಎಂ.ಬಿ. ಪಾಟೀಲ, ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ಎಸ್ಪಿ ಡಾ.ಡಿ.ಸಿ. ರಾಜಪ್ಪ ಅವರು ಕಾರ್ಯ ಕ್ರಮ ನಡೆಸಲು ಸೂಕ್ತ ಸ್ಥಳ ಪರಿಶೀಲನೆ ನಡೆಸಿದರು.
 

ರಾಹುಲ್ ಗಾಂಧಿ ಅವರು ಸಂವಾದ ನಡೆಸಲು ವಿಜಾಪುರ ಸೈನಿಕ ಶಾಲೆ, ಜಿಲ್ಲಾ ಕ್ರೀಡಾಂಗಣ, ಬಿಎಲ್‌ಡಿಇ ಸಂಸ್ಥೆಯ ಕಾಮರ್ಸ್ ಕಾಲೇಜು ಮೈದಾನವನ್ನು ಗುರುತಿಸ ಲಾಗಿತ್ತು. ರಾಹುಲ್ ಗಾಂಧಿ ಅವರ ವಿಶೇಷ ಭದ್ರತಾ ಪಡೆಯ ಅಧಿಕಾರಿ ಗಳು ಸಂಜೆ ನಗರಕ್ಕೆ ಆಗಮಿಸಿ, ಮೂರೂ ಸ್ಥಳಗಳನ್ನು ಪರಿಶೀಲಿಸಿ ದರು. ಅಂತಿಮವಾಗಿ ಕಾರ್ಯಕ್ರಮಕ್ಕೆ ಬಿಎಲ್‌ಡಿಇ ಸಂಸ್ಥೆಯ ಕಾಮರ್ಸ್ ಕಾಲೇಜಿನ ಮೈದಾನವನ್ನು ಆಯ್ಕೆ ಮಾಡಿದರು.
 

ರಾಹುಲ್ ಗಾಂಧಿ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ. ಕೇವಲ ಯುವ ಕಾಂಗ್ರೆಸ್ ಕಾರ್ಯಕರ್ತ ರನ್ನು ಮಾತ್ರ ಭೇಟಿಯಾಗಿ ಸಂವಾದ ನಡೆಸಲಿದ್ದಾರೆ. ಸುಮಾರು 3ರಿಂದ 5 ಸಾವಿರದಷ್ಟು ಕಾರ್ಯಕರ್ತರು ಸಂವಾದದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 

ADVERTISEMENT

ಇಂದು ಸಭೆ: ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಏ.18ರಂದು ಬೆಳಿಗ್ಗೆ 11ಕ್ಕೆ ಪಕ್ಷದ ತುರ್ತು ಸಭೆ ಕರೆಯಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಸುಣಗಾರ ಅಧ್ಯಕ್ಷತೆ ಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೈಜನಾಥ ಕರ್ಪೂರಮಠ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.