ADVERTISEMENT

ಸಕ್ಕರೆ ಕಾರ್ಖಾನೆಗಳ ಮನವೊಲಿಕೆಗೆ ಯತ್ನ

ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2013, 5:29 IST
Last Updated 11 ಡಿಸೆಂಬರ್ 2013, 5:29 IST

ಹುಬ್ಬಳ್ಳಿ: ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ನೀಡಲು ಮುಂದಾಗಿ ರುವುದರಿಂದ ಬೆಳೆಗಾರರಿಗೆ ಟನ್ ಕಬ್ಬಿಗೆ ₨2650 ನೀಡಲು ಸಕ್ಕರೆ ಕಾರ್ಖಾನೆಗಳ ಮಾಲೀಕರು ಒಪ್ಪ ಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಈ ವಾರ ಮತ್ತೊಮ್ಮೆ  ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಕರೆದು ಅವರ ಮನವೊಲಿಸ ಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ರಸ್ತೆಗಳ ದುರಸ್ತಿಗೆ ಕೇಂದ್ರ ಸರ್ಕಾರ ನೈಸರ್ಗಿಕ ವಿಕೋಪ ಪರಿಹಾರ ನಿಧಿಯಡಿ ₨1,000 ಕೋಟಿ ನೀಡಿದೆ. ಇದಕ್ಕೆ ರಾಜ್ಯ ಸರ್ಕಾರ ₨1,500 ಕೋಟಿ ತೆಗೆ ದಿಟ್ಟಿದೆ. ಶೀಘ್ರದಲ್ಲಿಯೇ ಗುಣಮಟ್ಟದ ರಸ್ತೆಗಳ ನಿರ್ಮಾಣ ಕೈಗೆತ್ತಿಕೊಳ್ಳ ಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸಲು ಇದೇ 12ರಂದು ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ.

ಆಯೋಗಕ್ಕೆ ರಾಜ್ಯ ಹೈಕೋರ್ಟ್‌ನ ನಿವೃತ್ತ ನ್ಯಾಯ ಮೂರ್ತಿ ಅಥವಾ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯನ್ನು ನೇಮಿಸಬೇಕಿರುವುದರಿಂದ ಆ ಪ್ರಕ್ರಿಯೆ ಸ್ವಲ್ಪ ತಡವಾಗಿದೆ ಎಂದರು. ಈರುಳ್ಳಿ ಬೆಲೆ ಕುಸಿಯದಂತೆ ನೋಡಿಕೊಳ್ಳಲಾಗುವುದು. ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಗೆ ಸರ್ಕಾರವೇ ಮುಂದಾಗಿದೆ. ಮೊದಲು ರೈತರೊಬ್ಬರಿಂದ 25 ಕ್ವಿಂಟಲ್ ಮಾತ್ರ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿತ್ತು. ಈಗ ರೈತರು ಎಷ್ಟು ಪ್ರಮಾಣದಲ್ಲಿ ತಂದರೂ ಖರೀದಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.