ADVERTISEMENT

ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2012, 9:45 IST
Last Updated 9 ಅಕ್ಟೋಬರ್ 2012, 9:45 IST

ಬಸವನಬಾಗೇವಾಡಿ: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದಾಗ ಮಾತ್ರ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಹೋರಹೊಮ್ಮಲು ಸಾಧ್ಯವಾಗುತ್ತದೆ. ಹೆಣ್ಣುಮಕ್ಕಳಿಗೆ ತಪ್ಪದೇ ಒಳ್ಳೆಯ ಶಿಕ್ಷಣ ನೀಡಬೇಕು.  ಆ ನಿಟ್ಟಿನಿಲ್ಲಿ ಪಾಲಕರ ಮತ್ತು ಶಿಕ್ಷಕರ ಜವಾಬ್ದಾರಿ ಮಹತ್ವದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೋಹನಪ್ರಭು ಹೇಳಿದರು.

ಸ್ಥಳೀಯ ಬಸವತತ್ವ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಬಸವತತ್ವ ವಿದ್ಯಾವರ್ಧಕ ಸಂಸ್ಥೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ದಲ್ಲಿ  ಅಧ್ಯಕ್ಷತೆ ವಹಿಸಿ  ಮಾತನಾಡಿದರು.

ನ್ಯಾಯಾಧೀಶ ಪಲ್ಲೇದ ರವೀಂದ್ರ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ಪಡೆದರೆ ಸಾಲದು. ಇಂಗ್ಲಿಷ್, ಹಿಂದಿ ಹಾಗೂ ಇತರ ಭಾಷೆಗಳನ್ನು ಕಲಿ ಯುವ ಅವಶ್ಯಕತೆ ಇದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಮತ್ತು ಪಾಲಕಾರ ಪಾತ್ರ ಮಹತ್ವದಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ದೈಹಿಕ ಶಿಕ್ಷಣಾಧಿಕಾರಿ ಎಂ.ಬಿ.ಹೆಬ್ಬಾಳ, ಸಂಸ್ಥೆಯ ಆಡಳಿತಾಧಿಕಾರಿ ಎಫ್. ಡಿ. ಮೇಟಿ ಮಾತನಾಡಿದರು. ಮಧ್ಯಸ್ಥಿಕೆ ಹಾಗೂ ಸಂಧಾನ ವಿಷಯ ಕುರಿತು ವಕೀಲ ಆರ್.ವಿ. ಗುತ್ತರಗಿಮಠ, ಮಕ್ಕಳ ಹಕ್ಕುಗಳು ವಿಷಯ ಕುರಿತು ವಕೀಲ ವಿ.ಬಿ.ಮರ್ತುರ ಮಾತನಾಡಿ ದರು.

ವಕೀಲ ಎಂ.ಎನ್.ಬಿಷ್ಟಗೊಂಡ, ಶಿಕ್ಷಣ ಸಂಯೋಜಕ ಎಸ್.ಬಿ.ಹಿಪ್ಪರಗಿ, ಮುಖ್ಯಗುರು ಬಿ.ವ್ಹಿ.ಪಟ್ಟಣಶೆಟ್ಟಿ ಇತರರು ಉಪಸ್ಥಿತರಿದ್ದರು.

ಶೋಭಾ ಅಂದೋಡಗಿ ಸ್ವಾಗತಿಸಿದರು, ಎಸ್. ಎಸ್.ಸಜ್ಜನ ವಂದಿಸಿದರು, ವಿ.ಎಸ್. ಮೂಲಿಮನಿ ನಿರೂಪಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.