ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 10 ಕಪ್ಪು ಶಿಲೀಂದ್ರ(ಬ್ಲ್ಯಾಂಕ್ ಫಂಗಸ್) ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ನಗರದ ಬಿಎಲ್ಡಿಇಯಲ್ಲಿ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿರುವ 8 ಮತ್ತು ಯಶೋಧಾ ಆಸ್ಪತ್ರೆಯಲ್ಲಿ 2 ಪ್ರಕರಣಗಳು ಕಂಡುಬಂದಿವೆ ಎಂದು ಹೇಳಿದರು.
ಸೋಮವಾರ 26 ಪ್ರಕರಣಗಳು ವರದಿಯಾಗಿದ್ದವು. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 36 ಕಪ್ಪು ಶಿಲೀಂಧ್ರ ರೋಗ ತಗುಲಿದ್ದು, ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.