ವಿಜಯಪುರ: ‘ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿ, 10 ನಾಡ ಪಿಸ್ತೂಲ್ ಮತ್ತು 24 ಸಜೀವ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.
‘ಅರಕೇರಿ ತಾಂಡಾ ನಂ.1ರಲ್ಲಿ ಈಚೆಗೆ ನಡೆದ ಕೊಲೆ ಪ್ರಕರಣದಲ್ಲಿ ಬಂಧಿತನಾದ ಆರೋಪಿ ಸಾಗರ ರಾಠೋಡನನ್ನು ವಿಚಾರಣೆಗೆ ಒಳಪಡಿಸಿದಾಗ, ನಾಡ ಪಿಸ್ತೂಲ್ ಮತ್ತು ಸಜೀವ ಗುಂಡುಗಳ ಬಗ್ಗೆ ಮಾಹಿತಿ ಸಿಕ್ಕಿತು. ಆತ ಅವುಗಳನ್ನು ಮಧ್ಯಪ್ರದೇಶದಿಂದ ಅಕ್ರಮವಾಗಿ ತಂದು, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಹಲವರಿಗೆ ಮಾರಿದ್ದು ತನಿಖೆಯಿಂದ ಗೊತ್ತಾಗಿದೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
‘ಸಾಗರ ರಾಠೋಡ ನಾಡ ಪಿಸ್ತೂಲ್‌ಗಳನ್ನು ₹ 50 ಸಾವಿರದಿಂದ ₹ 1 ಲಕ್ಷಕ್ಕೆ ಮಾರಿದ್ದ. ಅವುಗಳನ್ನು ಖರೀದಿಸಿದವರ ಮನೆಗಳ ಮೇಲೆ ದಾಳಿ ಕೈಗೊಂಡು, ಕಾರ್ಯಾಚರಣೆ ನಡೆಸಲಾಯಿತು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.