ADVERTISEMENT

ಸಿಂದಗಿ: 12 ಜೋಡಿ ಸಾಮೂಹಿಕ ವಿವಾಹ

​ಪ್ರಜಾವಾಣಿ ವಾರ್ತೆ
Published 19 ಮೇ 2025, 16:09 IST
Last Updated 19 ಮೇ 2025, 16:09 IST
ಸಿಂದಗಿ ತಾಲ್ಲೂಕು ಕಣ್ಣಗುಡ್ಡಿಹಾಳ ಗ್ರಾಮದಲ್ಲಿ ಕೆಂಚಲಿಂಗೇಶ್ವರ ಜಾತ್ರೆ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಧರ್ಮಸಭೆಯನ್ನು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು
ಸಿಂದಗಿ ತಾಲ್ಲೂಕು ಕಣ್ಣಗುಡ್ಡಿಹಾಳ ಗ್ರಾಮದಲ್ಲಿ ಕೆಂಚಲಿಂಗೇಶ್ವರ ಜಾತ್ರೆ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಧರ್ಮಸಭೆಯನ್ನು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು   

ಸಿಂದಗಿ: ತಾಲ್ಲೂಕಿನ ಕಣ್ಣಗುಡ್ಡಿಹಾಳ ಗ್ರಾಮದಲ್ಲಿ 20 ವರ್ಷಕ್ಕೊಮ್ಮೆ ಜರುಗುವ ಕೆಂಚಲಿಂಗೇಶ್ವರ ಜಾತ್ರೆಯ ಅಂಗವಾಗಿ ಸೋಮವಾರ 12 ಜೋಡಿ ಉಚಿತ ಸಾಮೂಹಿಕ ವಿವಾಹ ನೆರವೇರಿತು.

ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಧರ್ಮಸಭೆಯನ್ನು ಉದ್ಘಾಟಿಸಿದರು. ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ಮುಖ್ಯ ಅತಿಥಿಯಾಗಿ ಮಾತನಾಡಿದರು. ಶಾಸಕ ಅಶೋಕ ಮನಗೂಳಿ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ಅಶೋಕ ಶಾಬಾದಿ, ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ, ಸೋಮನಾಥ ಕಳ್ಳಿಮನಿ, ಮಲ್ಲಣ್ಣ ಸಾಲಿ, ಪ್ರಭು ದೊಡ್ಡಿನ, ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಬಾಪುಗೌಡ ಪಾಟೀಲ, ಕಲ್ಯಾಣಪ್ಪ ಪೂಜಾರಿ, ಮಡಿವಾಳಪ್ಪಗೌಡ ಬಿರಾದಾರ, ನಾನಾಗೌಡ ಬಿರಾದಾರ, ಶಿವನಗೌಡ ಬಿರಾದಾರ, ಅಶೋಕ ಸುಂಗಠಾಣ, ನಾಗಪ್ಪ ಮಾನ್ವಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.