ADVERTISEMENT

ವಿಜಯಪುರ: 144 ಜನರಿಗೆ ಸೋಂಕು ದೃಢ, ಸೋಂಕಿತರ ಸಂಖ್ಯೆ 1,120ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2020, 15:08 IST
Last Updated 16 ಜುಲೈ 2020, 15:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 144 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಕೋವಿಡ್‌ ಪೀಡಿತರ ಸಂಖ್ಯೆ 1,120ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.

22 ಜನ ಪೊಲೀಸರು ಸೇರಿದಂತೆ 10 ಜನ ಆರೋಗ್ಯ ಕಾರ್ಯಕರ್ತರು, 7 ಜನ ಕೈದಿಗಳು, ವಿವಿಧೆಡೆ ಪ್ರವಾಸ ಕೈಗೊಂಡ 5 ಜನರಲ್ಲಿ ಮತ್ತು 6 ಜನ ಮಹಾನಗರ ಪಾಲಿಕೆಯ ಸಿಬ್ಬಂದಿ ಹಾಗೂ ಇಬ್ಬರು ಎಸ್‌ಬಿಐ ಬ್ಯಾಂಕಿನ ಸಿಬ್ಬಂದಿಗಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಸೋಂಕು ತಗುಲಿರುವ ಸಂಬಂಧಪಟ್ಟ ಕಚೇರಿಗಳ ಸ್ಯಾನಿಟೈಜೇಶನ್‌ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ADVERTISEMENT

ಜಿಲ್ಲೆಯಲ್ಲಿ ಗುರುವಾರ 65 ಜನ ಗುಣಮುಖರಾಗಿದ್ದು, ಇಲ್ಲಿಯವರೆಗೆ ಒಟ್ಟು 719 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಲ್ಲಿ ಸದ್ಯ 382 ಕೋವಿಡ್ -19 ಪಾಸಿಟಿವ್ ಸಕ್ರಿಯ ರೋಗಿಗಳಿದ್ದು, ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತಿದೆ. ಇಲ್ಲಿಯವರೆಗೆ 19 ಜನ ಸಾವಿಗೀಡಾಗಿದ್ದಾರೆ.

ಜಿಲ್ಲೆಯಲ್ಲಿ 273 ಕಂಟೈನ್ಮೆಂಟ್ ವಲಯ ಗುರುತಿಲಾಗಿದೆ. ಈ ಪೈಕಿ 178 ವಲಯಗಳು ಚಾಲ್ತಿಯಲ್ಲಿದ್ದು, 95 ಡಿನೋಟಿಫೈ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.