ಇಂಡಿ: ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಮತ್ತು ವೀರ ಭಟಕರ ಜಲಾಶಯದಿಂದ ಸೋಮವಾರ 1.60 ಲಕ್ಷ ಕ್ಯುಸೆಕ್ ನೀರು ಬಿಡಲಾಗಿದೆ ಎಂದು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದ್ದಾರೆ.
ಮಹಾರಾಷ್ಟ್ರದ ಉಜನಿ ಜಲಾಶಯದಿಂದ 1.25 ಲಕ್ಷ ಮತ್ತು ವೀರ ಭಟಕರ ಜಲಾಶಯದಿಂದ 35 ಸಾವಿರ ಕ್ಯುಸೆಕ್ ನೀರು ಹರಿಯ ಬಿಡಲಾಗಿದೆ. ಮಹಾರಾಷ್ಟ್ರದ ಭೀಮಾ ನದಿ ಪಾತ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರದ ಸೂಚನೆಯ ಮೇರೆಗೆ ನೀರಾವರಿ ಇಲಾಖೆಯಿಂದ ನೀರು ಬಿಡಲಾಗುತ್ತಿದೆ ಎಂದು ಎಸಿ ಗದ್ಯಾಳ ತಿಳಿಸಿದ್ದಾರೆ.
ಸೋಮವಾರ ಸಂಜೆ ಇಲ್ಲವೇ ಮಂಗಳವಾರ ಭೀಮಾ ನದಿಯಲ್ಲಿ ಪ್ರವಾಹದ ಭೀತಿ ಇದೆ. ಭೀಮಾ ನದಿಯ ದಂಡೆಗೆ ಇರುವ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕು. ನದಿಗೆ ಸಮೀಪದಲ್ಲಿರುವ ತಮ್ಮ ಪಂಪ್‌ಸೆಟ್‌ಗಳನ್ನು, ಜಾನುವಾರುಗಳನ್ನು ಮತ್ತು ಮಹತ್ವದ ವಸ್ತುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.