
ವಿಜಯಪುರ: ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿ 22 ನಕಲಿ ವೈದ್ಯರನ್ನು ಪತ್ತೆ ಮಾಡಿ, ಕ್ಲಿನಿಕ್ ಬಂದ್ ಮಾಡಿ, ಬೀಗ ಹಾಕಿದ್ದಾರೆ.
ವಿಜಯಪುರ ತಾಲ್ಲೂಕಿನಲ್ಲಿ 4, ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ 9, ಮುದ್ದೇಬಿಹಾಳ ತಾಲ್ಲೂಕಿನಲ್ಲಿ 3, ಇಂಡಿ ತಾಲ್ಲೂಕಿನಲ್ಲಿ 4 ಹಾಗೂ ಸಿಂದಗಿ ತಾಲ್ಲೂಕಿನಲ್ಲಿ 2 ಸೇರಿದಂತೆ ಒಟ್ಟು 22 ನಕಲಿ ವೈದ್ಯರನ್ನು ಪತ್ತೆ ಮಾಡಲಾಗಿದೆ.
ಜಿಲ್ಲೆಯಾದ್ಯಂತ ನಕಲಿ ವೈದ್ಯರ ಹಾವಳಿ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ದಾಳಿ ನಡೆಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಕಲಿ ವೈದ್ಯರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ನಕಲಿ ವೈದ್ಯರು ಕರ್ತವ್ಯ ನಿರ್ವಹಿಸುತ್ತಿರುವುದು ಕಂಡುಬಂದಲ್ಲಿ ಸಾರ್ವಜನಿರು ಸಂಬಂಧಪಟ್ಟ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ದೂರು ಸಲ್ಲಿಸಬಹುದಾಗಿದೆ.
ಸಾರ್ವಜನಿಕರು ಆರೋಗ್ಯಕ್ಕೆ ಸಂಬಂಧಿಸಿದಂತೆ ಹತ್ತಿರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ/ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.