ವಿಜಯಪುರ: ನಗರ ಸೇರಿದಂತೆ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭೂಕಂಪನ ಆಗಿರುವುದು ರಿಕ್ಟರ್ ಮಾಪಕದಲ್ಲಿ ದಾಖಲಾಗಿರುವುದನ್ನು ಜಿಲ್ಲಾಡಳಿತ ದೃಢಪಡಿಸಿದೆ.
ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯಲ್ಲಿ ಭೂಕಂಪನ ಆಗಿರುವುದು ದಾಖಲಾಗಿದೆ.
ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಭೂಕಂಪನದ ಕೇಂದ್ರ ಬಿಂದುವಾಗಿತ್ತು ಎಂಬುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ದೃಢಪಡಿಸಿರುವುದಾಗಿ ವಿಜಯಪುರ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.