ADVERTISEMENT

ಸಾಮೂಹಿಕ ವಿವಾಹಕ್ಕೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2018, 7:27 IST
Last Updated 9 ಫೆಬ್ರುವರಿ 2018, 7:27 IST
ಮುದ್ದೇಬಿಹಾಳ ತಾಲ್ಲೂಕಿನ ಬಸರಕೋಡ ಗ್ರಾಮದಲ್ಲಿ ಶುಕ್ರವಾರ (ಫೆ 9) ನಡೆಯಲಿರುವ ಸಾಮೂಹಿಕ ವಿವಾಹದ ವೇದಿಕೆಯ ಪೂರ್ವ ತಯಾರಿಯನ್ನು ಗುರುವಾರ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಪರಿಶೀಲಿಸಿದರು
ಮುದ್ದೇಬಿಹಾಳ ತಾಲ್ಲೂಕಿನ ಬಸರಕೋಡ ಗ್ರಾಮದಲ್ಲಿ ಶುಕ್ರವಾರ (ಫೆ 9) ನಡೆಯಲಿರುವ ಸಾಮೂಹಿಕ ವಿವಾಹದ ವೇದಿಕೆಯ ಪೂರ್ವ ತಯಾರಿಯನ್ನು ಗುರುವಾರ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಪರಿಶೀಲಿಸಿದರು   

ಮುದ್ದೇಬಿಹಾಳ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಶುಕ್ರವಾರ (ಫೆ.9) ಮುದ್ದೇಬಿಹಾಳ, ದೇವರ ಹಿಪ್ಪರಗಿ ವಿಧಾನಸಭಾ ಮತಕ್ಷೇತ್ರಗಳಲ್ಲಿ ಪ್ರವಾಸ ನಡೆಸಲಿದ್ದಾರೆ. ದಶಕದ ಬಳಿಕ ಈ ಭಾಗಕ್ಕೆ ಭೇಟಿ ನೀಡುತ್ತಿರುವ ಪಕ್ಷದ ಅಗ್ರೇಸರನಿಗೆ ಅದ್ಧೂರಿ ಸ್ವಾಗತ ನೀಡಲು ಜೆಡಿಎಸ್‌ ಕಾರ್ಯಕರ್ತರು, ಮುಖಂಡರು ಸಜ್ಜಾಗಿದ್ದಾರೆ.

ಬಸರಕೋಡದ ಪವಾಡ ಬಸವೇಶ್ವರ ಸಂಸ್ಥೆ, ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಸಹಕಾರದೊಂದಿಗೆ ಆಯೋಜಿಸಿರುವ ಉಚಿತ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವ ದೇವೇಗೌಡ, ನವ ದಂಪತಿಗೆ ಆಶೀರ್ವದಿಸಿ, ಸಾರ್ವಜನಿಕ ರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸಂಜೆ 4 ಗಂಟೆಗೆ ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಕಲಕೇರಿಯಲ್ಲಿ ನಡೆಯಲಿರುವ ಜೆಡಿಎಸ್‌ನ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಮುಖಂಡರು ತಿಳಿಸಿದ್ದಾರೆ.

ADVERTISEMENT

ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಅದ್ಧೂರಿಯಿಂದ ನಡೆಸಲು, ಪವಾಡ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬೃಹತ್ ಮಂಟಪ, ವೇದಿಕೆ ನಿರ್ಮಿಸಲಾಗಿದೆ. ದೇವಸ್ಥಾನದ ವತಿಯಿಂದ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ.ಅಲ್ಲಿಯೇ ದೇವೇಗೌಡರನ್ನು ಅದ್ಧೂರಿಯಾಗಿ ಸನ್ಮಾನಿಸಲು ಸಂಘಟಕರು ತೀರ್ಮಾನಿಸಿ ದ್ದಾರೆ.

‘ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ದೇವೇಗೌಡರು ಬಹಳಷ್ಟು ಪ್ರಾಮಾಣಿಕ ವಾಗಿ ಶ್ರಮಿಸಿದ್ದಾರೆ. ಅವರನ್ನು ಸನ್ಮಾನಿಸಲು ಸಿದ್ಧತೆ ನಡೆದಿದೆ. ನನ್ನ ರಾಜಕೀಯಕ್ಕೆ ಮುನ್ನುಡಿ ಬರೆದ ಬಸರಕೋಡದಲ್ಲಿ ನಡೆಯುವ ಉಚಿತ ಸಾಮೂಹಿಕ ವಿವಾಹದಲ್ಲಿ ಅವರು ಪಾಲ್ಗೊಳ್ಳುತ್ತಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ’ ಎಂದು ಶಾಸಕ -ಎ.ಎಸ್.ಪಾಟೀಲ ನಡಹಳ್ಳಿ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.