ADVERTISEMENT

ವಿಜಯಪುರ: ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2021, 5:32 IST
Last Updated 16 ಮಾರ್ಚ್ 2021, 5:32 IST
ಬೆಳಗಾವಿ ಉತ್ತರ ವಲಯದ ಐಜಿಪಿ ಎಚ್.ಜಿ.ರಾಘವೇಂದ್ರ ಸುಹಾಸ್ ಅವರು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಸಂಚಲನ ವೀಕ್ಷಿಸಿದರು.
ಬೆಳಗಾವಿ ಉತ್ತರ ವಲಯದ ಐಜಿಪಿ ಎಚ್.ಜಿ.ರಾಘವೇಂದ್ರ ಸುಹಾಸ್ ಅವರು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಸಂಚಲನ ವೀಕ್ಷಿಸಿದರು.   

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 5ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ಮತ್ತು 1ನೇ ತಂಡದ ಕಾರಾಗೃಹ ವೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.

ಬೆಳಗಾವಿ ಉತ್ತರ ವಲಯದ ಐಜಿಪಿ ಎಚ್.ಜಿ.ರಾಘವೇಂದ್ರ ಸುಹಾಸ್ ಅವರು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಸಂಚಲನ ವೀಕ್ಷಿಸಿದರು.

ಪ್ರಶಿಕ್ಷಣಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು. ತರಬೇತಿ ಅವಧಿಯಲ್ಲಿ ವಿವಿಧ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ತೋರಿದವರಿಗೆ ಬಹುಮಾನ ವಿತರಿಸಲಾಯಿತು.

ADVERTISEMENT

ಐಜಿಪಿ ರಾಘವೇಂದ್ರ ಸುಹಾಸ್ ಮಾತನಾಡಿ, ಬಿಇ, ಬಿ.ಎಸ್ ಸಿ, ಡಿಪ್ಲೊಮಾ, ಎಂಬಿಎ ಓದಿದವರು ಪೊಲೀಸ್ ಇಲಾಖೆಗೆ ಸೇರ್ಪಡೆ ಯಾಗಿರುವುದು ಹೆಮ್ಮೆಯ ವಿಷಯ. ನಿಮ್ಮ ಶಿಕ್ಷಣ, ಅರ್ಹತೆಗೆ ತಕ್ಕಂತೆ ಇಲಾಖೆಯಲ್ಲಿ ಇನ್ನೂ ಉನ್ನತ ಹುದ್ದೆಗೆ ಆಯ್ಕೆಯಾಗಲು ಅವಕಾಶವಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕರ್ತವ್ಯ ದ ವೇಳೆ ದರ್ಪ, ದೌರ್ಜನ್ಯ ತೋರದೆ ನ್ಯಾಯಬದ್ಧವಾಗಿ ಯಾವುದೇ ದ್ವೇಷ, ರಾಗವಿಲ್ಲದೆ ಉತ್ತಮ ಕೆಲಸ ನಿರ್ವಹಿಸುವ ಮೂಲಕ ಇಲಾಖೆಗೆ, ಕುಟುಂಬಕ್ಕೆ ಹೆಸರು ತರಬೇಕು ಎಂದು ಸಲಹೆ ನೀಡಿದರು.

ಕಾರಾಗೃಹ ಇಲಾಖೆಗೆ ನೇಮಕವಾದವರು ಕರ್ತವ್ಯದ ವೇಳೆ ಕಾರಾಗೃಹ ಬಂಧಿಗಳ ಮನಪರಿವರ್ತನೆ ಮಾಡುವ ಮೂಲಕ ನಾಗರಿಕರನ್ನಾಗಿ ರೂಪಿಸಬೇಕು ಎಂದು ಸಲಹೆ ನೀಡಿದರು.

ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ಟಿಪಿಟಿಎಸ್ ಪ್ರಾಂಶುಪಾಲ ಡಾ.ರಾಮ ಅರಸಿದ್ದಿ ಉಪಸ್ಥಿತರಿದ್ದರು.

ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ಮತ್ತು ಕಾರಾಗೃಹ ವೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.