ADVERTISEMENT

ಮಕ್ಕಳ ಕಳ್ಳನೆಂದು ಮಾನಸಿಕ ಅಸ್ವಸ್ಥನಿಗೆ ಥಳಿಸಿದ ಜನ!

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 16:00 IST
Last Updated 26 ಸೆಪ್ಟೆಂಬರ್ 2022, 16:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿಜಯಪುರ:ತಿಕೋಟಾ ತಾಲ್ಲೂಕಿನ ಇಟ್ಟಂಗಿಹಾಳ ಗ್ರಾಮದ ಬಳಿ ಸೋಮವಾರ ಸಾರ್ವಜನಿಕರು ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಯೊಬ್ಬನನ್ನು ಹಿಡಿದು, ಮರಕ್ಕೆ ಕಟ್ಟಿ ಥಳಿಸಿದ್ದಾರೆ.

ಇಟ್ಟಂಗಿಹಾಳ ಗ್ರಾಮದ ಪೂಜಾರ ವಸತಿ ಬಳಿ ಅಪರಿಚಿತ ಯುವಕನನ್ನು ಹಿಡಿದು ಥಳಿಸಿದ ಬಳಿಕ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಕುರಿತು ’ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಮ್‌ ಅರಸಿದ್ಧಿ, ಸಾರ್ವಜನಿಕರಿಂದ ಥಳಿತಕ್ಕೆ ಒಳಗಾಗಿರುವ ವ್ಯಕ್ತಿ ಉತ್ತರ ಪ್ರದೇಶ ಮೂಲದವ. ಆತ ಮಾನಸಿಕ ಅಸ್ವಸ್ಥ ಇದ್ದಾನೆ. ಮಾತನಾಡಲು ಅವನಿಗೆ ಸರಿಯಾಗಿ ಬರುವುದಿಲ್ಲ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ADVERTISEMENT

ಜಿಲ್ಲೆಯಲ್ಲಿ ಮಕ್ಕಳ ಮಕ್ಕಳು ಬಂದಿದ್ದಾರೆ ಎಂಬುದು ಕೇವಲ ವದಂತಿ. ಇಂಥ ಸುಳ್ಳು ಸುದ್ದಿಗಳಿಗೆ ಒಳಗಾಗಿ ಮುಗ್ಧರು, ಅಮಾಯಕರನ್ನು ಥಳಿಸುವುದು ಸರಿಯಲ್ಲ. ಈ ರೀತಿ ಥಳಿಸಿದರೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಥಳಿಸಬಾರದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.