ADVERTISEMENT

ಆರ್‌ಟಿಒ ಕಚೇರಿ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 15:29 IST
Last Updated 5 ಡಿಸೆಂಬರ್ 2019, 15:29 IST

ವಿಜಯಪುರ: ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಕಚೇರಿ ಹಾಗೂ ಖಾಸಗಿ ಏಜೆಂಟರ ಅಂಗಡಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.

‘ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಜನರಿಂದ ನಿಗದಿತ ಹಣಕ್ಕಿಂತ ಹೆಚ್ಚಿನ ಹಣ ಸಂಗ್ರಹ ಮಾಡುತ್ತಿದ್ದರು ಎಂಬ ದೂರು ಬಂದಿದ್ದವು.
ದಾಳಿ ವೇಳೆ ₹2.40 ಲಕ್ಷ ನಗದು ಹಾಗೂ ಏಜೆಂಟರಿಂದ ದಾಖಲೆಗಳನ್ನು ವಶಕ್ಕೆ ಪಡೆದಿದ್ದೇವೆ. ಈ ಹಣದಲ್ಲಿ ಲಂಚದ ಹಣ ಎಷ್ಟಿತ್ತು ಎಂಬುದರ ಬಗ್ಗೆ ತನಿಖೆ ನಡೆದಿದೆ’ ಎಂದು ಎಸಿಬಿ ಮೂಲಗಳು ತಿಳಿಸಿವೆ.

ಎಸಿಬಿ ಎಸ್‌ಪಿ ಅಮರನಾಥ ರೆಡ್ಡಿ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ವೇಣುಗೋಪಾಲ ಎಲ್., ಇನ್‌ಸ್ಪೆಕ್ಟರ್‌ಗಳಾದ ಸಚಿನ್ ಎಸ್.ಚಲವಾದಿ, ರಾಘವೇಂದ್ರ ಹಳ್ಳೂರ ದಾಳಿಯ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.