ADVERTISEMENT

ಕಾರ್‌ಗಳ ಮುಖಾಮುಖಿ ಡಿಕ್ಕಿ: 6 ಜನರಿಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2024, 15:59 IST
Last Updated 8 ಆಗಸ್ಟ್ 2024, 15:59 IST
ಕೊಲ್ಹಾರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯ ಹಳ್ಳದ ಗೆಣ್ಣೂರ ಕ್ರಾಸ್‌ ಬಳಿ ಎರಡು ಕಾರ್‌ಗಳ ನಡುವೆ ನಡೆದ ಅಪಘಾತದಲ್ಲಿ ಕಾರುಗಳು ಜಖಂಗೊಂಡಿದೆ
ಕೊಲ್ಹಾರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯ ಹಳ್ಳದ ಗೆಣ್ಣೂರ ಕ್ರಾಸ್‌ ಬಳಿ ಎರಡು ಕಾರ್‌ಗಳ ನಡುವೆ ನಡೆದ ಅಪಘಾತದಲ್ಲಿ ಕಾರುಗಳು ಜಖಂಗೊಂಡಿದೆ   

ಕೊಲ್ಹಾರ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಎನ್‌.ಎಚ್‌ 218ರ ಹಳ್ಳದ ಗೆಣ್ಣೂರ ಕ್ರಾಸ್‌ ಬಳಿ ಎರಡು ಕಾರ್‌ಗಳ ನಡುವೆ ಗುರುವಾರ ಭೀಕರ ಅಪಘಾತ ಸಂಭವಿಸಿ ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ರೇಣುಕಾ ಬಿರಾದಾರ (40), ರೇಷ್ಮಾ ಬಿರಾದಾರ (30), ಅಮೃತ ಬಿರಾದಾರ  (10), ಶೈಲಜಾ ಬಿರಾದಾರ (50), ಶ್ರೀಶೈಲ ಬಿರಾದಾರ (45) ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಅಂಕಿತಾ ಬಿರಾದಾರ (17) ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮತ್ತೊಂದು ಕಾರಿನಲ್ಲಿದ್ದ ಬಬಲೇಶ್ವರ ತಾಲ್ಲೂಕಿನ ಕಾರಜೋಳ ಮೂಲದ ನಂದು ಜಾಧವ್ (40) ಅವರ ಕಾಲಿಗೆ ಗಂಭೀರ ಗಾಯವಾಗಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಎಸ್.ಸಿ ಗುರುಬೆಟ್ಟ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.