ADVERTISEMENT

ಅಪಘಾತ: ಮೂರು ಜನ, ಎಂಟು ಎಮ್ಮೆ ಸಾವು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 16:17 IST
Last Updated 21 ಸೆಪ್ಟೆಂಬರ್ 2021, 16:17 IST
ಕೊಲ್ಹಾರ ತಾಲ್ಲೂಕಿನ ರೋಣಿಹಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಮಂಗಳವಾರ ಸಂಜೆ ಲಾರಿ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಪೊಲೀಸರು ತೆರವು ಕಾರ್ಯಾಚರಣೆ ನಡೆಸಿದರು
ಕೊಲ್ಹಾರ ತಾಲ್ಲೂಕಿನ ರೋಣಿಹಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಮಂಗಳವಾರ ಸಂಜೆ ಲಾರಿ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಪೊಲೀಸರು ತೆರವು ಕಾರ್ಯಾಚರಣೆ ನಡೆಸಿದರು   

ಕೊಲ್ಹಾರ:ತಾಲ್ಲೂಕಿನ ರೋಣಿಹಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 218ರಲ್ಲಿಮಂಗಳವಾರ ಸಂಜೆಲಾರಿ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂರು ಜನ ಮತ್ತು ಎಂಟು ಎಮ್ಮೆಗಳು ಸಾವನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸೇಬು ತುಂಬಿದ ಲಾರಿ ಹಾಗೂ ಎಮ್ಮೆಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿದರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.

ಕ್ಯಾಂಟರ್‌ನಲ್ಲಿ ಸಾಗಿಸಲಾಗುತ್ತಿದ್ದ 19 ಎಮ್ಮೆಗಳ ಪೈಕಿ 8 ಎಮ್ಮೆಗಳು ಸ್ಥಳದಲ್ಲೇ ಸಾವಿಗೀಡಾಗಿವೆ. 11 ಎಮ್ಮೆಗಳು ಗಾಯಗೊಂಡಿವೆ.

ADVERTISEMENT

ಕ್ಯಾಂಟರ್‌ನಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಹಾಗೂ ಎಮ್ಮೆಗಳನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಹೊರ ತೆಗೆದರು. ಲಾರಿಯಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸುಮಾರು ಮೂರು ತಾಸುಗಳ ಕಾರ್ಯಾಚರಣೆ ನಡೆಸಿ ಹೊರ ತೆಗೆದರು.

ಘಟನೆಯಲ್ಲಿ ಸಾವಿಗೀಡಾದವರ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ದಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಕಾರ್ಯಾಚರಣೆ ನಿರ್ವಹಣೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.